
ಹಿರಿಯೂರು :
ಈ ಮಹಾಶಿವರಾತ್ರಿ ಹಬ್ಬವು ನಾಡಿನ ಸಮಸ್ತ ಜನತೆಗೆ ಸನ್ಮಂಗಳವನ್ನು ಉಂಟು ಮಾಡಲಿ, ನಾಡಿನಲ್ಲಿ ಉತ್ತಮ ಮಳೆ-ಬೆಳೆಯಾಗಿ ಶಾಂತಿ, ಸಮೃದ್ಧಿ ಮತ್ತು ಸೌಹಾರ್ದತೆ ನೆಲೆಸಲಿ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಭಗವಾನ್ ಪರಮೇಶ್ವರನನ್ನು ಪ್ರಾರ್ಥಿಸಿದರು.

ನಗರದ ವಾಟರ್ ಟ್ಯಾಂಕ್ ರಸ್ತೆಯಲ್ಲಿರುವ ಈಶ್ವರಿವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ 90ನೇ ಮಹಾಶಿವರಾತ್ರಿ ಮಹೋತ್ಸವದ ಕಾರ್ಯಕ್ರಮದಲ್ಲಿ ಸಹಸ್ರ ಲಿಂಗ ದರ್ಶನ ಹಾಗೂ ದ್ವಾದಶ ಜ್ಯೋತಿರ್ಲಿಂಗಗಳ ದರ್ಶನ ಪಡೆದು ನಂತರ ಅವರು ಮಾತನಾಡಿದರು.
ಈ ಮಹಾಶಿವರಾತ್ರಿ ಹಬ್ಬವು ಭಕ್ತಿ, ಶಾಂತಿ ಮತ್ತು ಧ್ಯಾನದ ಪ್ರತೀಕವಾಗಿದ್ದು, ನಾಡಿನ ಸಮಸ್ತ ಜನತೆಗೆ ಬದುಕಿನಲ್ಲಿ ಆರೋಗ್ಯ, ಐಶ್ವರ್ಯ ಮತ್ತು ಸಫಲತೆಯನ್ನು ಆ ಪರಮೇಶ್ವರನು ಕರುಣಿಸಲಿಸಲಿ ಎಂಬುದಾಗಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.
