March 2, 2026
0001

ಹಿರಿಯೂರು:

ನಗರದ ದಕ್ಷಿಣಕಾಶಿ ಶ್ರೀತೇರುಮಲ್ಲೇಶ್ವರಸ್ವಾಮಿ ದೇವಾಲಯದಲ್ಲಿ ಮಹಾಶಿವರಾತ್ರಿಯ ಅಂಗವಾಗಿ ಹಲವಾರು ಭಕ್ತರ ಸಮ್ಮುಖದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು    ನೆರವೇರಿಸಲಾಯಿತು.

ಮಹಾಶಿವರಾತ್ರಿಯ ಅಂಗವಾಗಿ ಮುಂಜಾನೆಯೇ ಶ್ರೀತೇರುಮಲ್ಲೇಶ್ವರಸ್ವಾಮಿಗೆ  ಪುಷ್ಪಾರ್ಚನೆ, ಪಂಚಾಮೃತ ಅಭಿಷೇಕ, ರುದ್ರಾಭಿಷೇಕ ವಿವಿಧ ಪೂಜಾ ಕಾರ್ಯಕ್ಮಗಳು ನಡೆದವು.

ಭಕ್ತಾದಿಗಳು ಸರತಿ ಸಾಲಿನಲ್ಲಿ ಬಂದು ಶ್ರೀತೇರುಮಲ್ಲೇಶ್ವರಸ್ವಾಮಿಯ ದರ್ಶನ ಭಾಗ್ಯವನ್ನು  ಪಡೆದರು. ಮುಂಜಾನೆಯಿಂದ  ಬರುತ್ತಿರುವ ಭಕ್ತರಿಗೆ  ತೀರ್ಥ ಪ್ರಸಾದ ವಿನಿಯೋಗ ನಡೆಯುತ್ತಿದೆ. ದೇವಾಲಯವನ್ನು ವಿವಿಧ ಹೂಗಳಿಂದ ಅಲಂಕರಿಸಲಾಗಿದ್ದು, ದೇವಾಲಯ ಶಿಖರ ಹಾಗೂ ದೀಪಸ್ತಂಭಕ್ಕೆ ಝಘಮಘಿಸುವ  ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದ್ದು ನೋಡುಗರ ಕಣ್ಮನ ಸೆಳೆಯುತ್ತಿದೆ.

About The Author

Leave a Reply

Your email address will not be published. Required fields are marked *