March 2, 2026
01

ಹಿರಿಯೂರು:

ನಗರದ ಪೊಲೀಸ್ ಕ್ವಾರ್ಟರ್ಸ್ ಆವರಣದಲ್ಲಿರುವ ಈಶ್ವರನ ದೇವಾಲಯದಲ್ಲಿ ಮಹಾಶಿವರಾತ್ರಿ ಅಂಗವಾಗಿ ವಿಶೇಷಪೂಜಾ ಕಾರ್ಯಕ್ರಮಗಳು ನೆರವೇರಿದವು. ದೇವರನ್ನು ವಿವಿಧ ಹೂವುಗಳಿಂದ  ಅಲಂಕರಿಸಲಾಗಿತ್ತು.

ಅರ್ಚನೆ, ಅಭಿಷೇಕ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ  ನಡೆಯಿತು.ಪೊಲೀಸ್ ಇಲಾಖೆಯ ಸಿಬ್ಬಂದಿ ವರ್ಗದವರು ಹಾಗೂ ಅನೇಕ ಭಕ್ತರು ಪೂಜಾಕಾರ್ಯಕ್ರಮದಲ್ಲಿ ಭಾಗವಹಿಸಿ ಸ್ವಾಮಿಯ ದರ್ಶನವನ್ನು ಪಡೆದು ದೇವರ ಕೃಪೆಗೆ ಪಾತ್ರರಾದರು.

About The Author

Leave a Reply

Your email address will not be published. Required fields are marked *