March 2, 2026
003

ಹಿರಿಯೂರು :

ತಾಲ್ಲೂಕಿನ ರೋಟರಿ ಹಾಗೂ ರೆಡ್ ಕ್ರಾಸ್ ಸಂಸ್ಥೆಗಳು ಸಾರ್ವಜನಿಕರ ಅನುಕೂಲಕ್ಕಾಗಿ ಹಲವಾರು ಆರೋಗ್ಯ ಶಿಬಿರಗಳನ್ನು ನಡೆಸುತ್ತಾ ಬಂದಿದ್ದು, ಇಂದು ನೇತ್ರ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸೆಯ ಶಿಬಿರವನ್ನು ಹಮ್ಮಿಕೊಂಡಿದ್ದು, ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆದುಕೊಂಡು ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ಮುಂದಾಗಬೇಕು ಎಂಬುದಾಗಿ ರೆಡ್ ಕ್ರಾಸ್ ಸಂಸ್ಥೆ ಚೇರ್ಮನ್ ಹೆಚ್.ಎಸ್.ಸುಂದರ್ ರಾಜ್ ಹೇಳಿದರು.

ತಾಲ್ಲೂಕಿನ ಐಮಂಗಲ ಗ್ರಾಮದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ. ರೋಟರಿಸಂಸ್ಥೆ ಹಿರಿಯೂರು ಹಾಗೂ ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆ ಇವರುಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆಯ ಶಿಬಿರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇದೇ ಸಂದರ್ಭದಲ್ಲಿ ಸ್ಥಳೀಯ ಪತ್ರಕರ್ತರಾದ ಮಲ್ಲಿಕಾರ್ಜುನರವರ ಪುತ್ರರು ಹಾಗೂ ಜರ್ನಲಿಸಂನಲ್ಲಿ ರಾಜ್ಯಮಟ್ಟದಲ್ಲಿ ಚಿನ್ನದ ಪದಕ ವಿಜೇತರಾದ ಚಂದನ್ ರವರನ್ನು  ಸನ್ಮಾನಿಸಿ, ಗೌರವಿಸಲಾಯಿತು.

ಈ ಕಾರ್ಯಕ್ರಮದಲ್ಲಿ ರೆಡ್ ಕ್ರಾಸ್ ಛೇರ್ಮನ್ ಹೆಚ್.ಎಸ್.ಸುಂದರರಾಜ್, ಉಪಾಧ್ಯಕ್ಷರಾದ ನಾಗಣ್ಣ, ಯುವ ರೆಡ್ ಕ್ರಾಸ್ ಛೇರ್ಮನ್ ಶಶಿಕಲಾರವಿಶಂಕರ್, ಖಜಾಂಜಿಗಳಾದ ಸಣ್ಣಭೀಮಣ್ಣ, ನಿರ್ದೇಶಕರಾದ ಪರಮೇಶ್ವರ ಭಟ್, ಬಸವೇಶ್ವರ ಆಸ್ಪತ್ರೆಯ ಡಾ.ನಿರಂಜನ್, ಡಾ.ಜಾಹ್ನವಿ, ಗ್ರಾಮಪಂಚಾಯಿತಿ ಸದಸ್ಯರಾದ ಸಿದ್ದೇಶ್ವರ, ದಿವಾಕರ್, ಸರ್ಕಾರಿ ಮಾಧ್ಯಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ರಂಗಮ್ಮ ಉಪಸ್ಥಿತದಲ್ಲಿದ್ದರು.

About The Author

Leave a Reply

Your email address will not be published. Required fields are marked *