
ಹಿರಿಯೂರು:
ಪ್ಲಾಸ್ಟಿಕ್ ಬಳಕೆಯಿಂದ ನೀರು, ಗಾಳಿ, ಮಣ್ಣು, ಪರಿಸರ ಜೀವಸಂಕುಲ, ಪ್ರಾಣಿ, ಪಕ್ಷಿ, ಮನುಷ್ಯನ ಆರೋಗ್ಯದ ಮೇಲೆ ಅಪಾಯಕಾರಿ ಪರಿಣಾಮ ಬೀರುತ್ತದೆ. ನೂರಾರು ಕಾಯಿಲೆಗಳಿಗೆ ತುತ್ತಾಗಿ ಸಾಯುತ್ತಿದ್ದಾರೆ, ಆದ್ದರಿಂದ ಭಾರತ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಬೇಕು. ಅದಕ್ಕಾಗಿ ಜಾಗತಿಕ ಪ್ಲಾಸ್ಟಿಕ್ ಒಪ್ಪಂದಕ್ಕೆ ಸಹಿ ಮಾಡಲಿ ಎಂಬುದಾಗಿ ಸಾಮಾಜಿಕ ಕಾರ್ಯಕರ್ತ ಹಾಗೂ ರೈನ್ ಟ್ರಸ್ಟ್ ಅಧ್ಯಕ್ಷರಾದ ಕಸವನಹಳ್ಳಿ ರಮೇಶ್ ಹೇಳಿದರು.
ತಾಲ್ಲೂಕಿನ ಕೆ.ಆರ್.ಹಳ್ಳಿ ಸರ್ಕಾರಿ ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ಜಾಗತಿಕ ಪ್ಲಾಸ್ಟಿಕ್ ಒಪ್ಪಂದಕ್ಕೆ ಭಾರತ ಸಹಿ ಮಾಡಲಿ, ಎಂಬ ವಿಷಯದ ಕುರಿತು ಹಮ್ಮಿಕೊಳ್ಳಲಾಗಿದ್ದ ಚರ್ಚಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇದೇ ಸಂದರ್ಭದಲ್ಲಿ ಪರಿಸರವಾದಿ ಡಾ.ಹೆಚ್.ಎಸ್.ಕೆ.ಸ್ವಾಮಿ ಮಕ್ಕಳಿಗೆ ಚರಕ ಹಾಗೂ ಹಳೆಯ ವಸ್ತುಗಳಿಂದ ಮರುಪಯೋಗಿ ಮಾಡುವ, ಖಾದಿ ಬಟ್ಟೆ ತೊಡುವಂತೆ ಪ್ರೇರೇಪಿಸಿದರು ಮತ್ತು ಈ ಬಗ್ಗೆ ಪ್ರತ್ಯಕ್ಷಕ್ಕೆ ನೀಡಿದರು.
ರೈನ್ ಟ್ರಸ್ಟ್ ಕಾರ್ಯದರ್ಶಿ ಮಂಜುನಾಥ್ ಕಳ್ಳಿಹಟ್ಟಿ ಪ್ಲಾಸ್ಟಿಕ್ ಬಳಕೆ ಮಾಡದಂತೆ ಪ್ರಮಾಣವಚನ ಬೋಧಿಸಿದರು. ಶಾಲೆಯ ಮುಖ್ಯ ಶಿಕ್ಷಕರಾದ ಮಂಜುನಾಥ್ ಎನ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಎನ್. ಜಿ . ಓ ಶಿವಕುಮಾರ್, ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾದ ಮಂಜುನಾಥ್ ಮಾಳಿಗೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

