
ಹಿರಿಯೂರು:
ನಗರದ ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂಬುದನ್ನು ಸಾರ್ವಜನಿಕರಿಗೆ ಮನವರಿಕೆ ಮಾಡವ ನಿಟ್ಟಿನಲ್ಲಿ ಬೀದಿನಾಟಕದ ಮೂಲಕ ಸಾರ್ವಜನಿಕರಿಗೆ ಸ್ವಚ್ಚತೆ ಹಾಗೂ ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ನಗರಸಭೆ ವತಿಯಿಂದ ಆಯೋಜಿಸಲಾಗಿತ್ತು.

ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಸ್ವಚ್ಚ ಭಾರತ್ ಮಿಷನ್ 2.0 ಅಡಿಯಲ್ಲಿ ಐ.ಇ.ಸಿ. ಸಾರ್ವಜನಿಕ ಮೇಳ ಅಥವಾ ಬೀದಿ ನಾಟಕದ ಮೂಲಕ ಸಾರ್ವಜನಿಕರಲ್ಲಿ ಹಸಿಕಸ ಒಣಕಸ ಬೇರ್ಪಡಿಸುವಂತೆ ಮತ್ತು ಪ್ಲಾಸ್ಟಿಕ್ ನಿಷೇಧದ ಸಾಂಕ್ರಾಮಿಕ ರೋಗಗಳ ಬಗ್ಗೆ ನಾಟಕದ ಮೂಲಕ ಮೂಡಿಸಲಾಯಿತು.
ಈ ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತರಾದ ಎ.ವಾಸೀಂ, ಆರೋಗ್ಯ ನಿರೀಕ್ಷಕರುಗಳಾದ ಸುನಿಲ್ ಕುಮಾರ್, ವೈ.ಎಸ್. ಸಂಧ್ಯಾ, ಮಹಾಲಿಂಗರಾಜ್, ಅಶೋಕ್ ಕುಮಾರ್, ನಯಾಜ್ ಷರೀಫ್ ಮತ್ತು ಪೌರಕಾರ್ಮಿಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

