
ಹಿರಿಯೂರು:
ನಗರದ ನಾಗರೀಕರು ನಗರವನ್ನು ಸ್ವಚ್ಛ ಹಾಗೂ ಸುಂದರ ನಗರವನ್ನಾಗಿ ಮಾಡುವ ನಿಟ್ಟಿನಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇದಿಸುವುದರ ಜೊತೆಗೆ ನಿಮ್ಮ ಮನೆಯಲ್ಲಿ ಕಸ ಹಾಕುವಾಗ ಹಸಿಕಸ, ಒಣಕಸವನ್ನು ಬೇರ್ಪಡಿಸಿ ಸಂಗ್ರಹಿಸುವ ಮೂಲಕ ಪರಿಸರ ಸಂರಕ್ಷಣೆ ಹಾಗೂ ಸುರಕ್ಷತೆಗೆ ಮುಂದಾಗಬೇಕು ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು.

ನಗರದ ನಗರಸಭೆ ಆವರಣದಲ್ಲಿ ಸ್ವಚ್ಛ ಭಾರತ್ ಮಿಷನ್ ಐ.ಇ.ಸಿ ಕಾರ್ಯಕ್ರಮದಡಿ ಜನರಲ್ಲಿ ಮತ್ತು ಹಸಿ ಕಸ ಒಣಕಸ ಬಗ್ಗೆ ಜಾಗೃತಿ ಮೂಡಿಸಲು ಹಮ್ಮಿಕೊಳ್ಳಲಾಗಿದ್ದ ಸ್ವಚ್ಛತಾ ರ್ಯಾಲಿ ಕಾರ್ಯಕ್ರಮವನ್ನು ಉದ್ಘಾಟಿಸಿ,ಅವರು ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ನಗರ ಮತ್ತು ಗ್ರಾಮಾಂತರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ಖಾದಿ ರಮೇಶ್ ಪೌರಾಯುಕ್ತರಾದ ಎ.ವಾಸೀಂ ಹಾಗೂ ನಗರಸಬಾ ಮಾಜಿ ಅಧ್ಯಕ್ಷರುಗಳು, ಮಾಜಿ ಉಪಾಧ್ಯಕ್ಷರುಗಳು, ಮಾಜಿ ಸದಸ್ಯರುಗಳು ಮತ್ತು ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

