
ಹಿರಿಯೂರು :
ಗ್ರಾಮದ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಈ ಕಾಮಗಾರಿ ಕೈಗೊಳ್ಳಲಾಗಿದ್ದು, ಉತ್ತಮ ಗುಣಮಟ್ಟದ ರಸ್ತೆ ನಿರ್ಮಾಣದ ಮೂಲಕ ಸ್ಥಳೀಯ ನಿವಾಸಿಗಳಿಗೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವುದು ನಮ್ಮ ಉದ್ದೇಶವಾಗಿದೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು.

ತಾಲೂಕಿನ ಮಸ್ಕಲ್ ಮಟ್ಟಿ ಗ್ರಾಮದ ಎಸ್.ಸಿ. ಕಾಲೋನಿಯಲ್ಲಿ ಸಿ.ಸಿ. ರಸ್ತೆ ಕಾಮಗಾರಿಯ ಗುದ್ದಲಿ ಪೂಜೆ ನೆರವೇರಿಸಿ, ನಂತರ ಅವರು ಮಾತನಾಡಿದ ಅವರು ಜನರ ಸಹಕಾರದೊಂದಿಗೆ ಕಾಮಗಾರಿ ಶೀಘ್ರವಾಗಿ ಪೂರ್ಣಗೊಳ್ಳಲಿದೆ ಎಂಬುದಾಗಿ ಗ್ರಾಮಸ್ಥರಿಗೆ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು,ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

