March 2, 2026
005

ಹಿರಿಯೂರು :

ತಾಲೂಕಿನ ಹೊಸಯಳನಾಡು ಗ್ರಾಮದ ಮಾಜಿ ಸೈನಿಕರಾದ ಶ್ರೀ ವೆಂಕಟೇಶ್ ಅವರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಭೇಟಿ ನೀಡಿ, ಇತ್ತೀಚೆಗೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಾಯಗೊಂಡಿರುವ ಹಿನ್ನೆಲೆ ಅವರ ಆರೋಗ್ಯದ ಯೋಗಕ್ಷೇಮವನ್ನು ವಿಚಾರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ಅವರ ಕುಟುಂಬದ ಸದಸ್ಯರಿಗೆ ಧೈರ್ಯ ಹೇಳಿ, ನಮ್ಮ ದೇಶಕ್ಕಾಗಿ ಸೇವೆ ಸಲ್ಲಿಸಿದ ಯೋಧರ ಬಗ್ಗೆ ಕಾಳಜಿ ವಹಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು, ವೆಂಕಟೇಶ್ ಅವರು ಶೀಘ್ರವಾಗಿ ಸಂಪೂರ್ಣ ಗುಣಮುಖರಾಗಲಿ ಎಂಬುದಾಗಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ವೆಂಕಟೇಶ್ ಅವರ ಕುಟುಂಬಸ್ಥರು ಉಪಸ್ಥಿತರಿದ್ದರು.

ಫೊಟೋ ಇದೆ-05

About The Author

Leave a Reply

Your email address will not be published. Required fields are marked *