March 2, 2026
0006

ಹಿರಿಯೂರು :

ಸಾರ್ವಜನಿಕ ಆಸ್ಪತ್ರೆಗೆ ಬರುವ ರೋಗಿಗಳು ಹಾಗೂ ಅವರ ಸಂಬಂಧಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಾರದ 6 ದಿನಗಳು ಸಹ ಊಟದ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂಬುದಾಗಿ ರೆಡ್ ಕ್ರಾಸ್ ಸಂಸ್ಥೆ ಕಾರ್ಯದರ್ಶಿ ಎಂ.ಎಸ್.ರಾಘವೇಂದ್ರ ಹೇಳಿದರು.

ನಗರದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ರೆಡ್ ಕ್ರಾಸ್ ಸಂಸ್ಥೆ ಹಾಗೂ ರೋಟರಿ ಸಂಸ್ಥೆ ವತಿಯಿಂದ ಆಸ್ಪತ್ರೆಗೆ ಬರುವ ರೋಗಿಗಳಿಗೆ ಹಾಗೂ ಅವರ ಸಂಬಂಧಿಗಳಿಗೆ ಆಹಾರ ವ್ಯವಸ್ಥೆ ಕಲ್ಪಿಸಿ ನಂತರ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ರೆಡ್ ಕ್ರಾಸ್ ಸಂಸ್ಥೆ ಕಾರ್ಯದರ್ಶಿ ಎಂ.ಎಸ್.ರಾಘವೇಂದ್ರ, ಎ.ರಾಘವೇಂದ್ರ,  ಟಿ.ಹೆಚ್.ಓ. ಡಾ.ವೆಂಕಟೇಶ್, ಎಸ್.ಎಲ್.ಎನ್. ವೆಂಕಟೇಶ್, ಸೇರಿದಂತೆ ರೆಡ್ ಕ್ರಾಸ್ ಸಂಸ್ಥೆ ಸದಸ್ಯರು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *