April 17, 2026
00002

ಹಿರಿಯೂರು:

ಸಮಾಜದ ಅಭಿವೃದ್ಧಿಯಲ್ಲಿ  ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಮಹಿಳೆಯರು ಶಿಕ್ಷಣ, ರಾಜಕೀಯ, ಉದ್ಯಮ ಸೇರಿದಂತೆ  ಎಲ್ಲಾ ಕ್ಷೇತ್ರಗಳಲ್ಲಿ ಮುನ್ನಡೆಯುತ್ತಿರುವುದು  ಹೆಮ್ಮೆಯ ವಿಷಯ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರು  ಹೇಳಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ  ಕೇಕ್ ಕಟ್ ಮಾಡುವ ಮೂಲಕ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರ ಸಬಲೀಕರಣವೇ ದೇಶದ ಸಮಗ್ರ ಅಭಿವೃದ್ಧಿಗೆ ಅಡಿಗಲ್ಲು.  ಮಹಿಳೆಯರು ಸಮಾಜದ ಕಣ್ಣು. ಮಹಿಳೆ  ವಿವಿಧ ಕ್ಷೇತ್ರಗಳಲ್ಲಿ  ತಮ್ಮನ್ನು ತೊಡಗಿಸಿಕೊಂಡು ಅಭಿವೃದ್ಧಿ ಹೊಂದಿದರೆ ಸಮಾಜವು ಪ್ರಗತಿ ಸಾಧಿಸಲು   ಸಾಧ್ಯ ಎಂಬುದಾಗಿ ಅವರು ಹೇಳಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿರಮೇಶ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ  ಈರಲಿಂಗೇಗೌಡ,  ಶ್ರೀಮತಿಗೀತಾನಂದಿನಿಗೌಡ, ಶಶಿಕಲಾಸುರೇಶ್ ಬಾಬು, ಶ್ರೀಮತಿ ಜೆ.ಆರ್.ಸುಜಾತ,  ಶ್ರೀಮತಿ ಮಂಜುಳಾ, ಶ್ರೀಮತಿ ಮಮತಾ, ಶ್ರೀಮತಿ ಶಿವರಂಜಿನಿಯಾದವ್, ಶ್ರೀಮತಿ ತಿಪ್ಪಮ್ಮ ಶ್ರೀಮತಿ,ಅಂಬಿಕಾ ಸೇರಿದಂತೆ ಅನೇಕ ಮಹಿಳೆಯರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *