
ಹಿರಿಯೂರು :
ಲಂಬಾಣಿ ಸಮುದಾಯದ ಸಾಮಾಜಿಕ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಕಾರ್ಯಕ್ರಮಗಳಿಗೆ ಈ ಸಾಂಸ್ಕೃತಿಕ ಭವನವು ಮಹತ್ವದ ಕೇಂದ್ರವಾಗಲಿದೆ. ಗ್ರಾಮೀಣ ಪ್ರದೇಶದ ಜನರಿಗೆ ವಿವಿಧ ಕಾರ್ಯಕ್ರಮಗಳನ್ನು ನಡೆಸಲು ಹಾಗೂ ಸಮುದಾಯದ ಅಭಿವೃದ್ಧಿಗೆ ಇದು ಸಹಕಾರಿಯಾಗಲಿದೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು.

ತಾಲೂಕಿನ ಮಾಳಗೊಂಡನಹಳ್ಳಿ ಲಂಬಾಣಿ ತಾಂಡದಲ್ಲಿ ಸೇವಾಲಾಲ್ ಸಾಂಸ್ಕೃತಿಕ ಭವನ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ, ನಂತರ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು,ಸ್ಥಳೀಯ ಮುಖಂಡರು, ಗ್ರಾಮಸ್ಥರು ಹಾಗೂ ಸಮುದಾಯದ ಹಿರಿಯರು ಉಪಸ್ಥಿತರಿದ್ದರು.
