April 15, 2026
000003

ಹಿರಿಯೂರು :                                            

ವಾತಾವರಣದ ಚಳಿ, ಮಳೆ, ಬಿಸಿಲು, ಗಾಳಿ ಯಾವುದನ್ನು ಲೆಕ್ಕಿಸದೇ ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿಸಲು ಬೆಳಗಿನಜಾವದಿಂದಲೇ ತಮ್ಮ ವೃತ್ತಿಯನ್ನು ಯಾವುದೇ ಲೋಪಬಾರದಂತೆ ಅಚ್ಚುಕಟ್ಟಾಗಿ ನಿರ್ವಹಿಸುವ ಪೌರಕಾರ್ಮಿಕರುಗಳ ಆರೋಗ್ಯ ಸುರಕ್ಷತೆಗಾಗಿ ನಮ್ಮ ನಗರಸಭೆ ವತಿಯಿಂದ ಆರೋಗ್ಯ ತಪಾಸಣೆ ಶಿಬಿರ ನಡೆಸಲಾಗುತ್ತಿದೆ ಎಂಬುದಾಗಿ ನಗರಸಭೆ ಪೌರಾಯುಕ್ತರಾದ ಎ.ವಾಸೀಂ ಹೇಳಿದರು.

ನಗರದ ನಗರಸಭೆ ಕಾರ್ಯಾಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ “ನಾರಿಯರ ನಡೆ ಸ್ವಚ್ಛತೆ ಕಡೆ” ಎಂಬ ಕಾರ್ಯಕ್ರಮದಡಿಯಲ್ಲಿ ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ ಮತ್ತು ಸನ್ಮಾನ, ನೈರ್ಮಲ್ಯ ಮತ್ತು ತ್ಯಾಜ್ಯ ನಿರ್ವಹಣೆಯಲ್ಲಿ ತೊಡಗಿರುವ ಮಹಿಳಾ ಪೌರಕಾರ್ಮಿಕರು ಹಾಗೂ ಸ್ವಸಹಾಯ ಗುಂಪುಗಳ ಸಾಮರ್ಥ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

“ಯತ್ರ ನಾರ್ಯಸ್ತು ಪೂಜ್ಯಂತೇ ರಮಂತೇ ತತ್ರ ದೇವತಾ” ಎಂಬಂತೆ ನಗರದ ಸ್ವಚ್ಛತೆ ಕಾರ್ಯದಲ್ಲಿ ತೊಡಗಿರುವ ಪೌರಕಾರ್ಮಿಕರಲ್ಲಿ ಪುರುಷರಿಗಿಂತ ಮಹಿಳೆಯರೇ ಹೆಚ್ಚಾಗಿದ್ದು, ಅಂತಹ ಮಹಿಳೆಯರಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ನಗರಸಭೆ ವತಿಯಿಂದ ಪೌರಕಾರ್ಮಿಕ ಮಹಿಳೆಯರನ್ನು   ಸನ್ಮಾನಿಸಲಾಗುತ್ತಿದೆ ಎಂದರಲ್ಲದೆ,

ನೈರ್ಮಲ್ಯ ಮತ್ತು ತ್ಯಾಜ್ಯ ನಿರ್ವಹಣೆಯಲ್ಲಿ ಹಸಿಕಸ ಹಾಗೂ ಒಣಕಸವನ್ನು ಬೇರ್ಪಡಿಸಿ ಸಂಗ್ರಹಿಸಬೇಕಲ್ಲದೆ, ಕಸವನ್ನು ರಸ್ತೆಗೆ ಹಾಕದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕುರಿತಂತೆ ವಿವಿಧ ವಿಚಾರಗಳ ಕುರಿತು ನಗರಸಭೆಯಿಂದ ತರಬೇತಿ ನೀಡಲಾಗುತ್ತಿದೆ, ಇದರ ಸದ್ಭಳಕೆಯಾಗಬೇಕು ಎಂಬುದಾಗಿ ಹೇಳಿದರು.

ಈ ಕಾರ್ಯಕ್ರಮದಲ್ಲಿ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಗಾಯಿತ್ರಿಅಕ್ಕನವರು, ನಗರಸಭೆ ಪೌರಾಯುಕ್ತರಾದ ಎ.ವಾಸಿಂ ಮತ್ತು ಆರೋಗ್ಯ ನಿರೀಕ್ಷಕರುಗಳಾದ ಶ್ರೀಮತಿ ಸಂಧ್ಯಾ, ಸುನೀಲ್ ಕುಮಾರ್, ಅಶೋಕ್ ಕುಮಾರ್, ಮಹಾಲಿಂಗರಾಜು, ನಯಾಜ್ ಶರೀಫ್ ಮತ್ತು ಕಚೇರಿ ಸಿಬ್ಬಂದಿ ವರ್ಗದವರು ಮತ್ತು ಮಹಿಳಾ ಸ್ವಸಹಾಯ ಸಂಘದವರು ಮತ್ತು ಪೌರಕಾರ್ಮಿಕರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *