April 15, 2026
00002

ಹಿರಿಯೂರು :

ರೈತರಿಗೆ ಈ ಚೆಕ್ ಡ್ಯಾಂ ನಿರ್ಮಾಣದಿಂದ ನೀರಿನ ಸೌಲಭ್ಯ ಹೆಚ್ಚಾಗುವುದರ ಜೊತೆಗೆ ಭೂಗರ್ಭ ಜಲಮಟ್ಟವೂ ಏರಿಕೆಯಾಗಲಿದೆ, ಕೃಷಿ ಅಭಿವೃದ್ಧಿಗೆ ಹಾಗೂ ಗ್ರಾಮೀಣ ಪ್ರದೇಶದ ನೀರಿನ ಸಮಸ್ಯೆ ನಿವಾರಣೆಗೆ ಇಂತಹ ಯೋಜನೆಗಳು ಬಹಳ ಮುಖ್ಯವಾಗಿವೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು.

ತಾಲೂಕಿನ ಬೆಟ್ಟಗೊಂಡನಹಳ್ಳಿ ಗ್ರಾಮದಲ್ಲಿ ಚೆಕ್ ಡ್ಯಾಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ, ನಂತರ ಅವರು ಮಾತನಾಡಿದರು.

ಈ ಕಾಮಗಾರಿ ಶೀಘ್ರವಾಗಿ ಪೂರ್ಣಗೊಂಡು ಗ್ರಾಮೀಣ ಪ್ರದೇಶದ ನೀರಿನ ಸಮಸ್ಯೆ ನಿವಾರಣೆಯಾಗಿ ರೈತರಿಗೆ ಮತ್ತು ಸಾರ್ವಜನಿಕರಿಗೆ ಹೆಚ್ಚಿನ ಪ್ರಯೋಜನ ತಂದುಕೊಡಲಿ ಎಂಬುದಾಗಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *