
ಹಿರಿಯೂರು :
ಗ್ರಾಮೀಣ ಭಾಗಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ನಮ್ಮ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಉತ್ತಮ ರಸ್ತೆ ಸೌಲಭ್ಯದಿಂದ ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗುವುದಲ್ಲದೆ, ಗ್ರಾಮದ ಸಮಗ್ರ ಅಭಿವೃದ್ಧಿಗೂ ಇದು ನೆರವಾಗಲಿದೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು.
ತಾಲೂಕಿನ ಅಬ್ಬಿನಹೊಳೆ ಗ್ರಾಮದ ಎಸ್.ಸಿ ಕಾಲೋನಿಯಲ್ಲಿ ಸಿ.ಸಿ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ, ನಂತರ ಅವರು ಮಾತನಾಡಿದರು.
ಈ ಕಾಮಗಾರಿ ಶೀಘ್ರದಲ್ಲೇ ಪೂರ್ಣಗೊಂಡು ಗ್ರಾಮಸ್ಥರಿಗೆ ಉತ್ತಮ ಸೌಲಭ್ಯ ಲಭಿಸಲಿ ಎಂಬುದಾಗಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
