April 19, 2026
00006

ಹಿರಿಯೂರು :

ಆಶ್ರಮದ ಹಿತೈಷಿಗಳೂ ದಾನಿಗಳು, ಪವರ್ ಸ್ಟಾರ್ ಅಭಿಮಾನಿಗಳು ಹಾಗೂ ಶ್ರೀಮಾಹಿ ಜೂವೇಲರ್ಸ್ ಹಾಗೂ ಮಾಹಿ ಫಾರಂ ಹೌಸ್ ಮಾಲೀಕರಾದ ಮಲ್ಲೇಣು ಗ್ರಾಮದ ಶ್ರೀ ಕೌಶಿಕ್ ನಾಯ್ಡು ರವರ ಧರ್ಮಪತ್ನಿ ಶ್ರೀಮತಿ ಭಾನುಮತಿರವರು ಡಾ. ಪುನೀತ್ ರಾಜಕುಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಆಶ್ರಮದ ನಿವಾಸಿಗಳಿಗೆ ಅನ್ನ ಸಂತರ್ಪಣೆಯನ್ನು ಮಾಡುತ್ತಿರುವುದು ಸಂತಸದ ವಿಚಾರವಾಗಿದೆ ಎಂಬುದಾಗಿ ಆಶ್ರಮದ ಮುಖ್ಯಸ್ಥರಾದ ತೇಜೋಮೂರ್ತಿ ಹೇಳಿದರು.

ತಾಲ್ಲೂಕಿನ ಭೀಮನಬಂಡೆ ಶ್ರೀ ಶುಭೋದಯ ಶೈಕ್ಷಣಿಕ ಸೇವಾ ಆಶ್ರಮದಲ್ಲಿ . ಪುನೀತ್ ರಾಜಕುಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಅನ್ನ ಸಂತರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಪ್ರತಿವರ್ಷ ವರ್ಷದಂತೆ ಈ ವರ್ಷವೂ ಸಹ ಶ್ರೀ ಆಶ್ರಮಕ್ಕೆ ಭೇಟಿ ನೀಡಿ ಇಲ್ಲಿನ ಎಲ್ಲಾ ಹಿರಿಯರಿಗೆ ಊಟದ ವ್ಯವಸ್ಥೆ ಮಾಡಿಸಿರುವುದು ಶ್ಲಾಘನೀಯ ಕಾರ್ಯವಾಗಿದ್ದು, ಶ್ರೀಮತಿ ಭಾನುಮತಿರವರ ಸೇವಾಮನೋಭಾವಕ್ಕೆ ಅವರಿಗೆ ಹಾಗೂ ಅವರ ಕುಟುಂಬವರ್ಗಕ್ಕೆ ದೈವಾನುಗ್ರಹ ಪ್ರಾಪ್ತಿಯಾಗಲೆಂದು ಆಶ್ರಮದ ನಿವಾಸಿಗಳ ಪರವಾಗಿ ತುಂಬು ಹೃದಯದ ಧನ್ಯವಾದಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಶ್ರೀಮತಿ ಭಾನುಮತಿರವರ ಕುಟುಂಬಸ್ಥರು, ಆಶ್ರಮದ ನಿವಾಸಿಗಳು ಹಾಗೂ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *