April 16, 2026
00005

ಹಿರಿಯೂರು :

ಮಹಿಳೆಯು ಎಲ್ಲಾ ಕ್ಷೇತ್ರಗಳಲ್ಲಿ ತನ್ನದೇ ಆದ ಚಾಪನ್ನು ಮೂಡಿಸಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ, ಸಬಲಳಾಗುವ ಜೊತೆಗೆ ಇತರರಿಗೂ ಮಾದರಿಯಾಗಿದ್ದಾಳೆ, ಇಂಥ ಮಹಿಳೆಗೆ ಗೌರವ ಸಲ್ಲಿಸುವ ಈ ಮಹಿಳಾ ದಿನಾಚರಣೆ ತುಂಬಾ ಅರ್ಥಪೂರ್ಣವಾಗಿದೆ ಎಂಬುದಾಗಿ ಸತ್ವ ಮಹಿಳಾ ಸಂಸ್ಥೆಯ ಅಧ್ಯಕ್ಷರು ,ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಮಹಿಳಾ ಘಟಕದ ರಾಜ್ಯ ನಿರ್ದೇಶಕರಾದ ಶ್ರೀಮತಿ ಶಶಿಕಲಾ ರವಿಶಂಕರ್ ಹೇಳಿದರು.

ನಗರದ ಪೇಟೆಬಸವಣ್ಣ ದೇವಸ್ಥಾನದಲ್ಲಿ ಸತ್ವ ಮಹಿಳಾ ಸಂಸ್ಥೆ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಿಳಾ ಘಟಕದ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಮಹಿಳಾ ಉದ್ಯಮಿಯಾದ ಶ್ರೀಮತಿ ಗೀತಾ ಹಿಮಾಚಲೇಶ್ ರವರನ್ನು ಸನ್ಮಾನಿಸಿ ಗೌರವಿಸಲಾಯಿತು. ಮಹಿಳೆಯರಿಗೆ ಹೂ ಕಟ್ಟುವ ಸ್ಪರ್ಧೆ ಹಾಗೂ ಕುಚ್ಚು ಹಾಕುವ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ತ್ರಿವೇಣಿ ಸತೀಶ್, ಹಾಗೂ ಜಿಲ್ಲಾ ಘಟಕದ ನಿರ್ದೇಶಕರಾದ ಶ್ರೀಮತಿ ಅಮೂಲ್ಯ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ತಾಲೂಕು ಘಟಕದ ಉಪಾಧ್ಯಕ್ಷರಾದ,ಶ್ರೀಮತಿ ವೀಣಾಉಮಾಶಂಕರ್ ಅವರು ಹಾಗೂ ಕಾರ್ಯದರ್ಶಿ, ಲಲಿತಮ್ಮಮಲ್ಲೇಶ್ವರ, ಹಾಗೂ ಸ್ವಪ್ನ, ಭಾವನಾ , ಲತಾ ಶಿವಪ್ರಸಾದ್, ಯಶೋಧ, ಸುಧಾ, ಕವಿತಾ, ಯಮುನಾ ಉಮಾಕಾಂತ, ಮಂಜುಳಾ, ನಾಗರತ್ನ, ಪದ್ಮಆನಂದ್, ಅನುಸೂಯಮ್ಮ ಉಪಸ್ಥಿತರಿದ್ದರು. ಶ್ರೀಮತಿ ರಾಜೇಶ್ವರಿ ಅವರು ಕುಚ್ಚು ತರಬೇತಿ ಶಿಬಿರವನ್ನು ನಡೆಸಿಕೊಟ್ಟರು.

ಸತ್ವ ಮಹಿಳಾ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಯಾದ ಶ್ರೀಮತಿ ಸರ್ವಮಂಗಳ ಕಾರ್ಯಕ್ರಮ ನಿರೂಪಿಸಿದರು, ಶ್ರೀಮತಿನಿರ್ಮಲಮಹಾಂತೇಶ್, ಸ್ವಾಗತಿಸಿದರು, ಪ್ರಧಾನ ಕಾರ್ಯದರ್ಶಿ ಶ್ರೀಮತಿ ಲತಾ ಶಿವಪ್ರಸಾದ್ ವಂದನಾರ್ಪಣೆ ಮಾಡಿದರು.

About The Author

Leave a Reply

Your email address will not be published. Required fields are marked *