April 12, 2026
000006

ಹಿರಿಯೂರು :

ತಾಲ್ಲೂಕಿನಲ್ಲಿ ಈ ವರ್ಷ ಉತ್ತಮ ಮಳೆಯಾಗಿ ರೈತರು ಹಾಗೂ ನಾಡಿನ ಜನತೆ ಸಮೃದ್ಧಿಯಾಗಿರಲಿ, ತಾಲ್ಲೂಕಿನೆಲ್ಲೆಡೆ ಸುಖ-ಶಾಂತಿ-ನೆಮ್ಮದಿ ನೆಲೆಸಲಿ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಪ್ರಾರ್ಥಿಸಿದರು.

ತಾಲ್ಲೂಕಿನ ವದ್ದೀಕೆರೆ ಸಿದ್ದೇಶ್ವರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು. ನಂತರ ಅವರು ಮಾತನಾಡಿದರು.

ಬಳಿಕ ಜಾತ್ರೆಗೆ ಸಂಬಂಧಿಸಿದ ವ್ಯವಸ್ಥೆಗಳ ಕುರಿತು ದೇವಸ್ಥಾನದ ಸಮಿತಿ ಹಾಗೂ ಸಾರ್ವಜನಿಕರೊಂದಿಗೆ ಕುಂದುಕೊರತೆ ಸಭೆ ನಡೆಸಿ, ಜನರ ಸಮಸ್ಯೆಗಳು ಹಾಗೂ ಸಲಹೆಗಳನ್ನು ಆಲಿಸಿ ತಕ್ಷಣದ ಪರಿಹಾರಕ್ಕೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *