April 11, 2026
00002

ಹಿರಿಯೂರು :

ಇಂದಿನ ಆಧುನಿಕ ಜಗತ್ತಿನಲ್ಲಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ತರಬೇತಿಯ ಅಗತ್ಯವಿದ್ದು, ಸರ್ಕಾರ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಶಿಕ್ಷಣ ಕೊಡುವ ನಿಟ್ಟಿನಲ್ಲಿ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಸರ್ಕಾರದ ಸೌಲಭ್ಯವನ್ನು ಬಳಸಿಕೊಂಡು ಉತ್ತಮ ಕೌಶಲ್ಯ ಬೆಳಸಿಕೊಳ್ಳಿರಿ ಎಂಬುದಾಗಿ ವಾಣಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಡಿ.ಧರಣೇಂದ್ರಯ್ಯ ತಿಳಿಸಿದರು.

ನಗರದ ವಾಣಿ ಸಕ್ಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪಿ.ಎಂ.ಉಷಾ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಕಂಪ್ಯೂಟರ್‌ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.

ಪಿ.ಎಂ.ಉಷಾ ಯೋಜನೆ ಸಂಚಾಲಕಿ ಡಾ.ದೇವಿಕಾ ಮಾತನಾಡಿ, ಈ ಪಿ.ಎಂ.ಉಷಾ ಯೋಜನೆ ರಾಜ್ಯದಲ್ಲಿ ಕೆಲವೇ ಕೆಲವು ಕಾಲೇಜುಗಳಿಗೆ ಮಾತ್ರ ಲಭ್ಯವಾಗಿದೆ, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಕಂಪ್ಯೂಟರ್ ಕಲಿಕೆಯಲ್ಲಿ ನೈಪುಣ್ಯತೆಯನ್ನು ಸಾಧಿಸಬೇಕು ಎಂಬುದಾಗಿ ತಿಳಿಸಿದರು.

ಆರಂಭದಲ್ಲಿ ಕಂಪ್ಯೂಟರ್ ತರಬೇತಿ ಸಂಚಾಲಕ ಡಾ.ಗಂಗಾಧರ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕರು, ಬೋಧಕೇತರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

About The Author

Leave a Reply

Your email address will not be published. Required fields are marked *