April 11, 2026
008

ಹಿರಿಯೂರು :

ಗ್ರಾಮೀಣ ಪ್ರದೇಶದಿಂದ ಬರುವ ರೋಗಿಗಳಿಗೆ ಹಾಗೂ ಅವರ ಬಂಧುಗಳ ಹಸಿವನ್ನು ನೀಗಿಸುವ ಉದ್ದೇಶದಿಂದ ಸಾರ್ವಜನಿಕರ ಆಸ್ಪತ್ರೆಯ ಮುಂಭಾಗದಲ್ಲಿ  ವಾರದ ಆರು ದಿನಗಳು ಸಹ ದಾನಿಗಳ ನೆರವಿನಿಂದ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ ಎಂಬುದಾಗಿ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಎಂ.ಎಸ್.ರಾಘವೇಂದ್ರ ಹೇಳಿದರು.

ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ರೋಟರಿ ಸಂಸ್ಥೆ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆಗಳ ಸಹಯೋಗದಲ್ಲಿ ಆಸ್ಪತ್ರೆಗೆ ಬರುವ  ರೋಗಿಗಳಿಗೆ ಉಚಿತ ಆಹಾರವನ್ನು ವಿತರಿಸಿ, ನಂತರ  ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ರೋಟೇರಿಯನ್ ಗಳು, ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *