April 11, 2026
0001

ಹಿರಿಯೂರು:

ಜಿಲ್ಲಾ ಉಸ್ತುವಾರಿ ಸಚಿವರು ಡಿ.ಸುಧಾಕರ್ ರವರ ಹುಟ್ಟುಹಬ್ಬದ ಪ್ರಯುಕ್ತ ಶ್ರೀಶುಭೋದಯ ಆಶ್ರಮಕ್ಕೆ ಅಕ್ಕಿ ವಿತರಣೆ ಮಾಡುತ್ತಿದ್ದು, ಇದು ನಿಜಕ್ಕೂ ಅರ್ಥಪೂರ್ಣ ಹಾಗೂ ಹೃದಯಸ್ಪರ್ಶಿ ಕಾರ್ಯಕ್ರಮವಾಗಿದೆ ಎಂಬುದಾಗಿ ಆಶ್ರಮದ ಮುಖ್ಯಸ್ಥರಾದ ತೇಜೋಮೂರ್ತಿ ಹೇಳಿದರು.

ತಾಲ್ಲೂಕಿನ ಭೀಮನ ಬಂಡೆಯ ಶ್ರೀಶುಭೋದಯ ವೃದ್ಧಾಶ್ರಮದಲ್ಲಿ ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿ, ವೃದ್ದಾಶ್ರಮದ ನಿವಾಸಿಗಳಿಗೆ ಅಕ್ಕಿ ವಿತರಿಸಿದ ಡಿ.ಸುಧಾಕರ್ ಅಭಿಮಾನಿಗಳಿಗೆ ಅಭಿನಂದನೆಯನ್ನು ಸಲ್ಲಿಸಿ, ಅವರು ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ಹೊಸಹಟ್ಟಿ ಮಾಜಿಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಚಿತ್ತಪ್ಪ ಬಬ್ಬೂರು, ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ವಿ. ಅರುಣ್ ಕುಮಾರ್, ಮಸ್ಕಲ್ ಗ್ರಾಮ ಪಂಚಾಯತಿ ಮಾಜಿ ಉಪಾಧ್ಯಕ್ಷರಾದ ಮಸ್ಕಲ್ ನಾಗರಾಜ್, ಸಚಿವರ ಅಭಿಮಾನಿಗಳು ಹುಟ್ಟು ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿದರು ಇಂತಹ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ತಂದರು.

About The Author

Leave a Reply

Your email address will not be published. Required fields are marked *