April 11, 2026
00001

ಹಿರಿಯೂರು :

ಇಂದು ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸುವ ಜೊತೆಗೆ ಪ್ರತಿ ತರಗತಿಯಲ್ಲೂ ಅವರ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಅತ್ಯಂತ ಕಾತುರದಿಂದ ಕಾಯುತ್ತಾರೆ, ಇಂತಹ ಪೋಷಕರಿಗೆ ಸಂತಸ ನೀಡುವ ಉದ್ದೇಶದಿಂದ ಪ್ರತಿ ತರಗತಿಯಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿಫಲಕ ಹಾಗೂ ಮೆಡಲ್ ಬಹುಮಾನ ನೀಡಲಾಗುತ್ತಿದೆ ಎಂಬುದಾಗಿ ವಾಣಿವಿಲಾಸ ವಿದ್ಯಾಸಂಸ್ಥೆ ಕಾರ್ಯದರ್ಶಿ ಆಲೂರು ಹನುಮಂತರಾಯಪ್ಪ ಅವರು ಹೇಳಿದರು.

ನಗರದ ವಾಣಿವಿಲಾಸ ವಿದ್ಯಾಸಂಸ್ಥೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪರೀಕ್ಷೆ ಫಲಿತಾಂಶ ಪ್ರಕಟಣೆ ಕಾರ್ಯಕ್ರಮದಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಫಲಕ ಹಾಗೂ ಮೆಡಲ್ ಗಳನ್ನು ವಿತರಿಸುವ ಮೂಲಕ ಶುಭಹಾರೈಸಿ, ನಂತರ ಅವರು ಮಾತನಾಡಿದರು.

ಇಂದಿನ ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನ ಆಧಾರಿತ ಶಿಕ್ಷಣಕ್ಕೆ ಹೆಚ್ಚು ಮಹತ್ವವಿದ್ದು, ಈ ನಿಟ್ಟಿನಲ್ಲಿ ನಮ್ಮ ಶಾಲೆಯ ಎಲ್ಲಾ ತರಗತಿಗಳನ್ನು ಡಿಜಿಲೀಕರಣ ಮಾಡಲಾಗಿದ್ದು, ಪ್ರತಿ ತರಗತಿಯಲ್ಲೂ ಟಿ.ವಿ.ಗಳನ್ನು ಅಳವಡಿಸಿ, ಶಿಕ್ಷಕರಿಗೆ ಸೂಕ್ತ ತರಬೇತಿ ಕೊಟ್ಟು, ವಿದ್ಯಾರ್ಥಿಗಳಿಗೆ ತಂತ್ರಜ್ಞಾನ ಆಧಾರಿತ ಶಿಕ್ಷಣವನ್ನು ನೀಡುವ ವ್ಯವಸ್ಥೆಯನ್ನು ಮಾಡಿದ್ದೇವೆ ಇದರ ಸದುಪಯೋಗವನ್ನು ನಗರದ ಪೋಷಕರು ಪಡೆದುಕೊಳ್ಳಬೇಕು ಎಂದರಲ್ಲದೆ,

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಪ್ರತಿ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದ 10 ವಿದ್ಯಾರ್ಥಿಗಳಿಗೆ ರ್ಯಾಂಕ್ ಗಳನ್ನು ನೀಡಲಾಗುತ್ತಿದ್ದು, ಈ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಫಲಕ ಹಾಗೂ ಮೆಡಲ್ ಗಳನ್ನು ಬಹುಮಾನವಾಗಿ ನೀಡುವ ಮೂಲಕ ಅವರಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹವನ್ನು ನೀಡಲಾಗುತ್ತಿದೆ ಎಂಬುದಾಗಿ ಹೇಳಿದರು.

ಈ ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕಿ ಶ್ರೀಮತಿ ಸೌಮ್ಯ, ವ್ಯವಸ್ಥಾಪಕಿ ಶ್ರೀಮತಿ ವಸಂತಾ, ಆಡಳಿತಾಧಿಕಾರಿ ಶ್ರೀಮತಿ ಹೇಮಲತಾ, ಶಿಕ್ಷಕಿಯರುಗಳಾದ ಶ್ರೀಮತಿ ರಂಜಿತಾ, ಶ್ರೀಮತಿ ಸಬೀಹಾ, ಶ್ರೀಮತಿ ಮುಬೀನಾ, ಶ್ರೀಮತಿ ಹೇಮಲತಾ, ಶ್ರೀಮತಿ ದ್ರಾಕ್ಷಾಯಣಿ, ಶ್ರೀಮತಿ ಸಾಧಿಕಾ, ಶ್ರೀಮತಿ ಮಮತಾ, ಶ್ರೀಮತಿ ಅಕ್ಷಿತಾ, ಶ್ರೀಮತಿ ಸುಲೋಚನಾ, ಪೂಜಾ, ಕಾವ್ಯ, ಕಾರ್ಯಕ್ರಮ ಸಂಯೋಜಕರಾದ ಶ್ರೀಮತಿ ಭಾಗ್ಯ, ಶ್ರೀಮತಿ ಜೈಸುಧಾ, ಶಿಕ್ಷಕರುಗಳಾದ ಉಮೇಶ್ ಯಾದವ್, ಶಿವರಾಜ್, ಸೇರಿದಂತೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಹಾಗೂ ಪೋಷಕರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *