
ಹಿರಿಯೂರು :
ನಗರದ ಶ್ರೀ ರಂಗನಾಥ ಪಿಯು (ಎಸ್.ಆರ್.ಪಿಯು) ಕಾಲೇಜಿಗೆ ಅತ್ಯುತ್ತಮ ಫಲಿತಾಂಶ ಬಂದಿದ್ದು, ವಾಣಿಜ್ಯ ವಿಭಾಗದಲ್ಲಿ ಸಮಗ್ನಾ 583 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿರುತ್ತಾರೆ, ವರುಣ್ 571 ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ, ತನುಶ್ರೀ 562 ಅಂಕಗಳನ್ನು ಪಡೆದು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

ವಿಜ್ಞಾನ ವಿಭಾಗದಲ್ಲಿ ಎಂ.ಸಮ್ರುದ್ಧಿ 561 ಅಂಕಗಳನ್ನು ಪಡೆದು ಮೊದಲ ಸ್ಥಾನ ಪಡೆದಿದ್ದಾರೆ, ಎಂ.ಸನ್ನಿಧಿ 560 ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ, ಕಾಂಚನಾ 554 ಅಂಕಗಳನ್ನು ಪಡೆದು ತೃತೀಯ ಸ್ಥಾನವನ್ನು ಗಳಿಸಿ ಕಾಲೇಜಿನ ಕೀರ್ತಿಯನ್ನು ತಂದಿದ್ದಾರೆ ಎಂಬುದಾಗಿ ಕಾಲೇಜಿನ ಕಾರ್ಯದರ್ಶಿಗಳಾದ ಟಿ.ವೀರಕರಿಯಪ್ಪ ತಿಳಿಸಿದ್ದಾರೆ.

ಪಿಯು ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದು ಶ್ರೀರಂಗನಾಥ ಪಿಯು (ಎಸ್.ಆರ್.ಪಿಯು) ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿರುವ ವಿದ್ಯಾರ್ಥಿಗಳಿಗೆ ಕಾರ್ಯದರ್ಶಿಗಳಾದ ಟಿ.ವೀರಕರಿಯಪ್ಪ, ಸಿ,ಇ,ಓ ಝೇಂಕಾರ್ ರಂಗನಾಥ್, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವರ್ಗದವರು ಅಭಿನಂದನೆಗಳನ್ನು ತಿಳಿಸಿದ್ದಾರೆ.
