April 14, 2026
004

ಹಿರಿಯೂರು :

ತಾಲೂಕಿನ ಕೂನಿಕೆರೆ ಗ್ರಾಮದಲ್ಲಿ ನೆಲೆಸಿರುವ ಶ್ರೀ ಆಂಜನೇಯ ಸ್ವಾಮಿಯ ರಥೋತ್ಸವ ಅತ್ಯಂತ ಭಕ್ತಿ ಭಾವದಿಂದ ನಡೆಯಿತು. ಇದರ ಅಂಗವಾಗಿ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಹಾಗೂ ಹೂವಿನ ಅಲಂಕಾರ ಮತ್ತು ಲೋಕಕಲ್ಯಾಣಕ್ಕಾಗಿ ವಿಶೇಷಪೂಜೆ ಹಾಗೂ ಮಹಾಮಂಗಳಾರತಿ ಕಾರ್ಯಕ್ರಮ ನಡೆಯಿತು.

ಈ ರಥೋತ್ಸವ ಕಾರ್ಯಕ್ರಮದಲ್ಲಿ ಕೂನಿಕೆರೆ ಸುತ್ತಮುತ್ತಲ ಗ್ರಾಮಸ್ಥರು ಸೇರಿದಂತೆ ಹಿರಿಯೂರು ತಾಲೂಕು ಚಿತ್ರದುರ್ಗ ಜಿಲ್ಲೆ ಹಾಗೂ ರಾಜ್ಯದ ನಾನಾ ಭಾಗಗಳಿಂದ ಬಂದಿದ್ದ, ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ಶ್ರೀಆಂಜನೇಯಸ್ವಾಮಿಯ ಜಾತ್ರೆ ಅಂಗವಾಗಿ ದೇವಾಲಯದ ಆವರಣದಲ್ಲಿ ಬೆಳಿಗ್ಗೆಯಿಂದ ರಾತ್ರಿವರೆಗೂ ಅನ್ನದಾಸೋಹ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

About The Author

Leave a Reply

Your email address will not be published. Required fields are marked *