April 14, 2026
006

ಹಿರಿಯೂರು :

ತಮ್ಮ ಸುಶ್ರಾವ್ಯವಾದ ಧ್ವನಿಯಿಂದ ಭಾರತೀಯ ಚಿತ್ರರಂಗದ ಹಿನ್ನೆಲೆ ಗಾಯನವನ್ನು ಶ್ರೀಮಂತಗೊಳಿಸಿದ್ದ ಖ್ಯಾತ ಹಿನ್ನೆಲೆ ಗಾಯಕಿ ಆಶಾಬೋಸ್ಲೆ (92 ವರ್ಷ) ಅವರು ಬಹು ಅಂಗಾಂಗ ವೈಫಲ್ಯದಿಂದ ಮುಂಬೈನಲ್ಲಿ ಭಾನುವಾರದಂದು ನಿಧನರಾಗಿದ್ದಾರೆ, ಗಾಯಕಿ ಆಶಾಬೋಸ್ಲೆರವರಿಗೆ “ಹಿರಿಯೂರುನ್ಯೂಸ್” ತಂಡದಿಂದ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಗಾಯಕಿ ಆಶಾಬೋಸ್ಲೆರವರು ಎಂಟು ದಶಕಗಳ ವೃತ್ತಿ ಜೀವನದಲ್ಲಿ ಹಿಂದಿ ಸೇರಿ ಹಲವು ಭಾರತೀಯ ಭಾಷೆಗಳಲ್ಲಿ ಸುಮಾರು 12 ಸಾವಿರಕ್ಕೂ ಹೆಚ್ಚು ಗೀತೆಗಳನ್ನು ಹಾಡುವ ಮೂಲಕ ದೇಶದ ಜನರ ಮನಸೂರೆಗೊಂಡಿದ್ದು, ಅವರ ನಿಧನದ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತನು ಅವರ ಕುಟುಂಬವರ್ಗದವರಿಗೆ ಕರುಣಿಸಲಿ ಎಂಬುದಾಗಿ ಹಿರಿಯೂರು ನ್ಯೂಸ್” ತಂಡದ ವತಿಯಿಂದ ಪತ್ರಕರ್ತರುಗಳಾದ ಆಲೂರುಹನುಮಂತರಾಯಪ್ಪ ಹಾಗೂ ಪಿ.ಆರ್.ಸತೀಶ್ ಬಾಬು, ಗೋಸಿಕೆರೆ ರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್, ಪರಮೇಶ್ವರಪ್ಪ, ವೆಂಕಟೇಶ್, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಸಂತಾಪಸೂಚಿಸಿದ್ದಾರೆ.

About The Author

Leave a Reply

Your email address will not be published. Required fields are marked *