
ಹಿರಿಯೂರು :
ವಿಶ್ವದಲ್ಲಿಯೇ ಅತ್ಯಂತ ಶ್ರೇಷ್ಠ ಸಂವಿಧಾನವನ್ನು ರಚಿಸುವ ಮೂಲಕ ದೇಶದಲ್ಲಿ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ತತ್ವದ ಆಧಾರದ ಮೇಲೆ ದೇಶದ ಕಟ್ಟಕಡೆಯ ವ್ಯಕ್ತಿಗೂ ಮೂಲಭೂತ ಸೌಲಭ್ಯಗಳು ಸಿಗುವಂತೆ ಮಾಡಿದ ಕೀರ್ತಿ ಡಾ.ಬಿ.ಆರ್.ಅಂಬೇಡ್ಕರ್ ರವರಿಗೆ ಸಲ್ಲುತ್ತದೆ ಎಂಬುದಾಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಎಂ.ಕುಮಾರಸ್ವಾಮಿ ಹೇಳಿದರು.
ತಾಲ್ಲೂಕಿನ ಎಂ.ಡಿ.ಕೋಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಎಂ.ಕುಮಾರಸ್ವಾಮಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ವಿಶ್ವನಾಥ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಎಂ.ಚಿದಾನಂದ, ನಿರ್ದೇಶಕರಾದ ಈರಣ್ಣ, ಗ್ರಂಥಾಲಯ ಕುಮಾರ್, ಆರ್.ಸಿದ್ದೇಶ್, ಯೂತ್ ಕಾಂಗ್ರೆಸ್ ತಾಲ್ಲೂಕು ಮಾಜಿ ಅಧ್ಯಕ್ಷರು ಹಾಗೂ ಸಂಘದ ಸಿಬ್ಬಂದಿ ವರ್ಗದವರು, ಊರಿನ ಮುಖಂಡರು ಹಾಜರಿದ್ದರು.
