
ಹಿರಿಯೂರು :
ದೇಶದಲ್ಲಿ ಯುದ್ಧದ ಕಾರಣದಿಂದ ಸಿಲಿಂಡರ್ ಗಳು ಸಿಗದೆ ಹೋಟೆಲ್ ಗಳು ಮುಚ್ಚಿ ಹೋಗಿದ್ದು, ಇಂತಹ ಸಂದರ್ಭದಲ್ಲಿ ನಮ್ಮ ರೋಟರಿ ಹಾಗೂ ರೆಡ್ ಕ್ರಾಸ್ ಸಂಸ್ಥೆಗಳು ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಉಚಿತ ಆಹಾರ ವಿತರಣೆ ಮಾಡುತ್ತಿರುವುದು ತುಂಬಾ ಸಹಕಾರಿಯಾಗಿದೆ ಎಂಬುದಾಗಿ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಎಂ.ಎಸ್.ರಾಘವೇಂದ್ರ ಹೇಳಿದರು.
ನಗರದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ರೆಡ್ ಕ್ರಾಸ್ ಹಾಗೂ ರೋಟರಿ ಸಂಸ್ಥೆ ವತಿಯಿಂದ ವಾರದ 6 ದಿನಗಳು ಹಮ್ಮಿಕೊಳ್ಳಲಾಗಿದ್ದ ಉಚಿತ ಆಹಾರ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಈ ಸಂದರ್ಭದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಎಂ.ಎಸ್.ರಾಘವೇಂದ್ರ, ಆಸ್ಪತ್ರೆಯ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
