April 15, 2026
000005

ಹಿರಿಯೂರು :

ದೇಶದಲ್ಲಿ ನೊಂದವರು, ಮಹಿಳೆಯರು, ಹಿಂದುಳಿದವರಿಗೆ ಸಮಾನತೆ ಕಲ್ಪಿಸುವ ನಿಟ್ಟಿನಲ್ಲಿ ವಿವಿಧ ದೇಶಗಳನ್ನು ಸುತ್ತಿ ಪ್ರತಿ ದೇಶದ ಉತ್ತಮ ಅಂಶಗಳನ್ನು ಆಯ್ದು ಒಟ್ಟಾಗಿ ಸೇರಿಸಿ, ವಿಶ್ವಕ್ಕೆ ಮಾದರಿಯಾಗುವ ಸಂವಿಧಾನ ರಚಿಸುವ ಮೂಲಕ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬಂತೆ ಸಮಾಜದ ಎಲ್ಲಾ ವರ್ಗದವರಿಗೂ ಸಮಾನ ಅವಕಾಶಗಳನ್ನ ನೀಡಿದ ಕೀರ್ತಿ ಡಾ.ಬಿ.ಆರ್.ಅಂಬೇಡ್ಕರ್ ರವರಿಗೆ ಸಲ್ಲುತ್ತದೆ ಎಂಬುದಾಗಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಆಲೂರುಹನುಮಂತರಾಯಪ್ಪ ಹೇಳಿದರು.

ನಗರದ ವಾಣಿವಿಲಾಸ ವಿದ್ಯಾಸಂಸ್ಥೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ.ಬಿ.ಆರ್.ಅಂಬೇಡ್ಕರ್ ರವರ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪನಮನವನ್ನು ಸಲ್ಲಿಸಿ, ನಂತರ ಅವರು ಮಾತನಾಡಿದರು.

ಇಂದು ಮಹಿಳೆಯರು ಶಿಕ್ಷಣವಂತರಾಗಿ ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡಿದ್ದಾರೆ, ಎಂದರೆ ಅದಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ರವರ ಸಂವಿಧಾನವೇ ಮುಖ್ಯ ಕಾರಣವಾಗಿದ್ದು, ಸಮಾಜದ ಎಲ್ಲಾ ವರ್ಗದ ಜನರಿಗೂ ಸಂವಿಧಾನದ ಮೂಲಭೂತ ಸೌಲಭ್ಯಗಳು ಸಿಗುವಂತೆ ಮಾಡಿದರಲ್ಲದೆ, ಮಹಿಳೆಯರ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಮಹತ್ವ ನೀಡಿದ್ದರು, ಅವರ ಹೋರಾಟ, ತತ್ವ, ಆದರ್ಶಗಳು ಹಾಗೂ ವಿಚಾರಧಾರೆಗಳು ಇಂದಿಗೂ ಪ್ರಸ್ತುತವಾಗಿವೆ ಎಂಬುದಾಗಿ ಹೇಳಿದರು.

ಈ ಕಾರ್ಯಕ್ರಮದಲ್ಲಿ ವಾಣಿವಿಲಾಸ ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕಿ ಶ್ರೀಮತಿ ಸೌಮ್ಯ, ವ್ಯವಸ್ಥಾಪಕಿ ಶ್ರೀಮತಿ ವಸಂತಾ, ಆಡಳಿತಾಧಿಕಾರಿ ಶ್ರೀಮತಿ ಹೇಮಲತಾ, ಶಿಕ್ಷಕಿಯರುಗಳಾದ ಶ್ರೀಮತಿ ಸಬೀಹಾ, ಶ್ರೀಮತಿ ಸಾಧಿಕಾ, ಶ್ರೀಮತಿ ದಾಕ್ಷಾಯಣಿ, ಶ್ರೀಮತಿ ಮಮತಾ, ಶ್ರೀಮತಿ ಹೇಮಲತಾ, ಶ್ರೀಮತಿ ಸುಲೋಚನ, ಶ್ರೀಮತಿ ಅಕ್ಷಿತಾ, ಕಾವ್ಯ, ಪೂಜಾ, ಕಾರ್ಯಕ್ರಮ ಸಂಯೋಜಕರಾದ ಶ್ರೀಮತಿ ಭಾಗ್ಯ, ಶ್ರೀಮತಿ ಜಯಸುಧಾ, ಶಿಕ್ಷಕರುಗಳಾದ ಉಮೇಶ್ ಯಾದವ್, ಶಿವರಾಜ್, ಕಾಂತರಾಜ್ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *