
ಹಿರಿಯೂರು :
ತಾಲ್ಲೂಕಿನ ಗ್ರಾಮೀಣ ಪ್ರದೇಶದ ಒಬ್ಬ ಸಾಮಾನ್ಯ ಮಹಿಳೆಯಾಗಿ ಕುಟುಂಬ ನಿರ್ವಹಣೆ ಜೊತೆಜೊತೆಗೆ ರಾಜಕೀಯ ಕ್ಷೇತ್ರದಲ್ಲಿ ತಮ್ಮನ್ನು ಗುರುತಿಸಿಕೊಂಡು ಅಪಾರ ಜನಪ್ರಿಯತೆ, ಹಾಗೂ ತಾಲ್ಲೂಕಿನ ಜನರ ಪ್ರೀತಿ-ವಿಶ್ವಾಸಗಳಿಸಿ, ಸಮಾಜದಲ್ಲಿ ಜನಪ್ರಿಯ ನಾಯಕಿಯಾಗಿ ಹೊರಹೊಮ್ಮುವ ಮೂಲಕ ಜನರ ನಂಬಿಕೆ ವಿಶ್ವಾಸ ಗಳಿಸಿರುವ ಸರಳ, ಸಜ್ಜನಿಕೆಯ ವ್ಯಕ್ತಿತ್ವದ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಶಶಿಕಲಾಸುರೇಶ್ ಬಾಬುರವರಿಗೆ “ಹಿರಿಯೂರು ನ್ಯೂಸ್” ತಂಡದ ವತಿಯಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.
ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಸುರೇಶ್ ಬಾಬುರವರ ಪತ್ನಿ ಹಾಗೂ ನಮ್ಮ ಅತ್ಯಂತ ಆತ್ಮೀಯರಾದ ಶ್ರೀಮತಿ ಶಶಿಕಲಾ ಸುರೇಶ್ ಬಾಬು ರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ, ಆಯಸ್ಸು, ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರು ಹನುಮಂತರಾಯಪ್ಪ ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆ ರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಜಗದೀಶ್, ಪರಮೇಶ್ವರಪ್ಪ, ವೆಂಕಟೇಶ್, ಇರ್ಪಾನ್ ವುಲ್ಲಾ, ಹಿದಾಯತ್ ವುಲ್ಲಾ ಇವರುಗಳು ಶುಭಹಾರೈಸಿದ್ದಾರೆ.
