

ಹಿರಿಯೂರು :
ತಾಲೂಕಿನ ಶ್ರೀಕ್ಷೇತ್ರ ವದ್ದೀಕೆರೆ ಗ್ರಾಮದಲ್ಲಿ ನೆಲೆಸಿರುವ ಕಾಲಭೈರವೇಶ್ವರ ಸ್ವಾಮಿ ಯಾನೆ ವದ್ದೀಕೆರೆ ಸಿದ್ದೇಶ್ವರ ಸ್ವಾಮಿ ದೇವರ ದಸರಾ ಉತ್ಸವ ಪೂಜಾ ಕಾರ್ಯಕ್ರಮಗಳು ಆರಂಭವಾಗಿದೆ ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಲೋಕಕಲ್ಯಾಣಕ್ಕಾಗಿ ಸ್ವಾಮಿಗೆ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂಬುದಾಗಿ ದೇವಸ್ಥಾನದ ಆಡಳಿತ ಮಂಡಳಿ ಮಾಧ್ಯಮಗಳಿಗೆ ತಿಳಿಸಿದೆ.

ಪ್ರತಿದಿನ ಸಂಜೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಡುಗಾರಿಕೆ ಭಜನೆ ಏರ್ಪಡಿಸಲಾಗಿದ್ದು, ಪ್ರತಿದಿನ ವಿಶೇಷ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಹಾಗೂ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ಏರ್ಪಡಿಸಲಾಗಿದೆ, ಸ್ವಾಮಿಯ ಭಕ್ತಾದಿಗಳು ಎಲ್ಲಾ ಪೂಜಾ ಕಾರ್ಯಕ್ರಮಗಳಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂಬುದಾಗಿ ದೇವಸ್ಥಾನದ ಸಮಿತಿಯವರು ಮನವಿ ಮಾಡಿದ್ದಾರೆ.