April 17, 2026
0003

ಹಿರಿಯೂರು :    

ಇರಾನ್, ಮತ್ತು ಅಮೇರಿಕಾ ನಡುವೆ ನಡೆಯುತ್ತಿರುವ ಭೀಕರ ಯುದ್ಧದಿಂದಾಗಿ ದೇಶದಲ್ಲಿ ಸಿಲಿಂಡರ್ ಗಳು ಸಿಗದೆ ಹೋಟೆಲ್ ಗಳು ಹಾಗೂ ರೆಸ್ಟೋರೆಂಟ್ ಗಳು ಮುಚ್ಚಿಹೋಗಿದ್ದು, ಇಂತಹ ಸಂದರ್ಭದಲ್ಲಿ ರೆಡ್ ಕ್ರಾಸ್ ಹಾಗೂ ರೋಟರಿ ಸಂಸ್ಥೆ ವತಿಯಿಂದ ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ವಾರದ 6 ದಿನಗಳು ಉಚಿತ ಆಹಾರ ನೀಡುತ್ತಿರುವುದರಿಂದ ಆಸ್ಪತ್ರೆಗೆ ಬರುವ ರೋಗಿಗಳಿಗೆ ಅನುಕೂಲವಾಗಿದೆ ಎಂಬುದಾಗಿ ಸಮಾಜಸೇವಕಿ ಶ್ರೀಮತಿ ಶಶಿಕಲಾ ರವಿಶಂಕರ್ ಹೇಳಿದರು.

ನಗರದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ರೆಡ್ ಕ್ರಾಸ್ ಹಾಗೂ ರೋಟರಿ ಸಂಸ್ಥೆ ವತಿಯಿಂದ ಆಸ್ಪತ್ರೆಗೆ ಬರುವ ರೋಗಿಗಳಿಗೆ ಮತ್ತು ಅವರ ಬಂಧುಗಳಿಗೆ ಶುಚಿರುಚಿಯಾದ ಬಿಸಿಬಿಸಿಯಾದ ಉಚಿತ ಆಹಾರವನ್ನು ವಿತರಿಸಿ, ನಂತರ ಅವರು ಮಾತನಾಡಿದರು.  ಈ ಸಂದರ್ಭದಲ್ಲಿ ಸಮಾಜಸೇವಕಿ ಶ್ರೀಮತಿ ಶಶಿಕಲಾ ರವಿಶಂಕರ್, ರೆಡ್ ಕ್ರಾಸ್ ಸದಸ್ಯರಾದ ಎ.ರಾಘವೇಂದ್ರ, ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *