
ಹಿರಿಯೂರು :
ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಹಿರಿಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಸಂಚಾಲಕರಾಗಿ ಕೇಶವಮೂರ್ತಿಯವರನ್ನು ಹಾಗೂ ಸಹ ಸಂಚಾಲಕರಾಗಿ ಎಂ.ನಿತಿನ್ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ ಎಂಬುದಾಗಿ ಬಿಜೆಪಿ ಮಂಡಲ ಅಧ್ಯಕ್ಷರಾದ ಕೆ.ಅಭಿನಂದನ್ ರವರು ತಿಳಿಸಿದ್ದಾರೆ.
ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಸಂಘಟನೆಯನ್ನು ಬಲಪಡಿಸುವುದು ಹಾಗೂ ಚುನಾವಣಾ ಸಿದ್ಧತೆಗಳನ್ನು ಚುರುಕುಗೊಳಿಸುವುದು ಈ ಆಯ್ಕೆಯ ಉದ್ದೇಶವಾಗಿದೆ ಎಂಬುದಾಗಿ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
