
ಹಿರಿಯೂರು :
ಭಾರತೀಯ ಜನತಾ ಪಾರ್ಟಿ ಹಿರಿಯೂರು ಮಂಡಲದ ತಾಲ್ಲೂಕಿನ ಬೇತೂರು ಗ್ರಾಮದಲ್ಲಿ ತಾಲ್ಲೂಕು ಅಧ್ಯಕ್ಷರಾದ ಶ್ರೀಯುತ ಕೆ.ಅಭಿನಂದನ್ ರವರು ಬೂತ್ ಮಟ್ಟದ ಕಾರ್ಯಕರ್ತರ ಸಭೆಯನ್ನು ಬಿಜೆಪಿ ಯಶಸ್ವಿಯಾಗಿ ನಡೆಸಿದರು .
ಈ ಸಂದರ್ಭದಲ್ಲಿ ಮಾತನಾಡಿದ ಅವರು ಪಕ್ಷದ ಕಾರ್ಯಕರ್ತರ ಕುಂದು ಕೊರತೆಗಳ ಬಗ್ಗೆ ಚರ್ಚಿಸಿ, ಸಂಘಟನೆಯನ್ನು ಬಲಪಡಿಸಿ ಮುಂದಿನ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಪಕ್ಷ ಅಧಿಕಾರಕ್ಕೆ ತರಬೇಕೆಂದು ಮನವಿ ಮಾಡಿದರು. ಈ ಸಭೆಯಲ್ಲಿ ಪಕ್ಷದ ಹಿರಿಯ ಮುಖಂಡರಾದ ಬೂತ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.
