
ಹಿರಿಯೂರು :
ವಿಶ್ವದ ಮೊದಲ ಸಂಸತ್ತು ಎಂದೇ ಕರೆಯಲಾಗುವ ‘ಅನುಭವ ಮಂಟಪ’ವನ್ನು ಸ್ಥಾಪಿಸಿ, ಅಲ್ಲಿ ಮಹಿಳೆಯರು ಮತ್ತು ದಲಿತರಿಗೆ ಮುಕ್ತ ಅವಕಾಶವನ್ನು ಕಲ್ಪಿಸಿದಂತಹ ಬಸವಣ್ಣನವರು ಸಾಮಾಜಿಕ ನ್ಯಾಯ, ಕಾಯಕ ಯೋಗ ಮತ್ತು ಮಹಿಳಾ ಸಬಲೀಕರಣಕ್ಕೆ ನೀಡಿದ ಕೊಡುಗೆ ಅಪಾರ, ಬಸವಣ್ಣನವರು ಹಾಕಿಕೊಟ್ಟ ಹಾದಿಯಲ್ಲಿ ಇಂದಿನ ಯುವಜನತೆ ಸಾಗಬೇಕು ಎಂಬುದಾಗಿ ನಗರಸಭೆ ಪೌರಾಯುಕ್ತರಾದ ಎ.ವಾಸಿಂ ಹೇಳಿದರು.
ನಗರದ ನಗರಸಭೆ ಕಛೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವಗುರು ಕರ್ನಾಟಕದ ಸಾಂಸ್ಕೃತಿಕ ನಾಯಕರಾದ ಶ್ರೀಬಸವಣ್ಣನವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತರಾದ ಎ.ವಾಸೀಂ, ಕಛೇರಿಯ ಎಲ್ಲಾ ಶಾಖೆಯ ಅಧಿಕಾರಿಗಳು, ನೌಕರರು ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
