
ಹಿರಿಯೂರು :
ದೂರದ ಗ್ರಾಮೀಣ ಪ್ರದೇಶದಿಂದ ಆಸ್ಪತ್ರೆಗೆ ಬರುವ ರೋಗಿಗಳು ಹಾಗೂ ಅವರ ಸಂಬಂಧಿಗಳಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ರೋಟರಿ ಹಾಗೂ ರೆಡ್ ಕ್ರಾಸ್ ಸಂಸ್ಥೆಯಿಂದ ಉಚಿತ ಆಹಾರ ವಿತರಣೆ ಮಾಡಲಾಗುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂಬುದಾಗಿ ವೈಸ್ ಚೇರ್ಮನ್ ಎ.ರಾಘವೇಂದ್ರ ಪ್ರಿಂಟಿ ಹೇಳಿದರು.
ನಗರದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ರೋಟರಿ ಹಾಗೂ ರೆಡ್ ಕ್ರಾಸ್ ಸಂಸ್ಥೆಯಿಂದ ವಾರದ 6 ದಿನಗಳು ಉಚಿತ ಆಹಾರ ವ್ಯವಸ್ಥೆಯನ್ನು ಮಾಡಿ, ಸಾರ್ವಜನಿಕರಿಗೆ ಆಹಾರವಿತರಿಸಿ, ನಂತರ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಸಾರ್ವಜನಿಕರು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
