April 23, 2026
004

ನಗರದ ವಾಣಿ ಸಕ್ಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ

ಪ್ರಥಮಪದವಿಗಳಾದ ಬಿ.ಎ,ಬಿ.ಕಾಂ,ಬಿಬಿಎ ಕೋರ್ಸ್ ಗಳಿಗೆ

2026-27ನೇ ಶೈಕ್ಷಣಿಕಸಾಲಿಗೆಪ್ರವೇಶಾತಿ ಪ್ರಾರಂಭವಾಗಿದೆ

ವಾಣಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಡಿ.ಧರಣೇಂದ್ರಯ್ಯ

ಹಿರಿಯೂರು :                                     

ನಗರದ ವಾಣಿ ಸಕ್ಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಪದವಿಗಳಾದ ಬಿ.ಎ, ಬಿ.ಕಾಂ, ಬಿಬಿಎ ಕೋರ್ಸ್ ಗಳಿಗೆ 2026-27 ನೇ ಶೈಕ್ಷಣಿಕ ಸಾಲಿಗೆ ಪ್ರವೇಶಾತಿ ಪ್ರಾರಂಭವಾಗಿದ್ದು, ಪಿಯುಸಿ, ಐಟಿಐ, ಡಿಪ್ಲೋಮೋ, ಪ್ಯಾರಾಮೆಡಿಕಲ್ ಕೋರ್ಸ್ ಗಳಲ್ಲಿ ತೇರ್ಗಡೆಯಾಗಿರುವ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶಾವಕಾಶವಿರುತ್ತದೆ ಎಂಬುದಾಗಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಡಿ.ಧರಣೇಂದ್ರಯ್ಯ ತಿಳಿಸಿದ್ದಾರೆ.

ಕಾಲೇಜಿನಲ್ಲಿ ಸುಸಜ್ಜಿತ ಗ್ರಂಥಾಲಯ, ಸುಸಜ್ಜಿತವಾದ ಕಂಪ್ಯೂಟರ್ ಲ್ಯಾಬ್, ನುರಿತ ಮತ್ತು ಅನುಭವಿ ಅಧ್ಯಾಪಕರಿಂದ ಬೋಧನೆ, ಸುಸಜ್ಜಿತ ಕ್ಯಾಂಟೀನ್ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ವಿದ್ಯಾರ್ಥಿನಿಯರಿಗೆ ವಿಶ್ರಾಂತಿ ಕೊಠಡಿ, ಸ್ಮಾರ್ಟ್ ಕ್ಲಾಸ್ ರೂಮ್, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸೇರಿದಂತೆ ವಿವಿಧ ರೀತಿಯ ಸೌಲಭ್ಯಗಳನ್ನು ಹೊಂದಿದ್ದು, ಆಸಕ್ತ ವಿದ್ಯಾರ್ಥಿಗಳು ಕಾಲೇಜಿಗೆ ಭೇಟಿ ಮಾಡಬಹುದಾಗಿದೆ.

ಪಿ.ಎಂ.ಉಷಾ ಯೋಜನೆಯಡಿಯಲ್ಲಿ ಸಾಫ್ಟ್ ಕಂಪೋನೇಂಟ್ ಕಾರ್ಯಕ್ರಮಗಳು, ವಿವಿಧ ಪ್ರಮುಖ ಕಂಪನಿಗಳಿಂದ ಉದ್ಯೋಗ ಮೇಳ, ವಿಷಯವಾರು ವಿಚಾರ ಸಂಕಿರಣ ಹಾಗೂ ಕಾರ್ಯಾಗಾರಗಳ ಆಯೋಜನೆ ಮಾಡಲಾಗಿದ್ದು, ಆಸಕ್ತರು ಈ ಕೆಳಗಿನ ಮೊಬೈಲ್ ನಂಬರ್ ಗಳನ್ನು ಸಂಪರ್ಕಿಸಬಹುದಾಗಿದೆ, 9449375252, 9845884174, 9036173326, 9880285776, 9901012367, 9916991088.

About The Author

Leave a Reply

Your email address will not be published. Required fields are marked *