April 23, 2026
3-1

ಹಿರಿಯೂರು :

ನಗರದ ನೆಹರು ಕ್ರೀಡಾಂಗಣದಲ್ಲಿರುವ ವಾಣಿವಿಲಾಸ ವಿದ್ಯಾಸಂಸ್ಥೆಯು ಈ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶವನ್ನು ಪಡೆದುಕೊಂಡಿದೆ. ಪರೀಕ್ಷೆಗೆ ಹಾಜರಾಗಿದ್ದ ಸುಮಾರು 28 ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ಪಡೆದುಕೊಳ್ಳುವ ಮೂಲಕ ವಿದ್ಯಾಸಂಸ್ಥೆಗೆ ಕೀರ್ತಿ ತಂದಿದ್ದಾರೆ ಎಂಬುದಾಗಿ ವಾಣಿವಿಲಾಸ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಆಲೂರು ಹನುಮಂತರಾಯಪ್ಪನವರು ಸಂತಸ ವ್ಯಕ್ತಪಡಿಸಿದ್ದಾರೆ.

ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಾದ ಉಮರ್ ಫರೂಕ್/ಅಲ್ಲಾಭಕ್ಷಿ 625 ಅಂಕಗಳಿಗೆ 531 ಅಂಕಗಳಿಸಿ ವಿದ್ಯಾಸಂಸ್ಥೆಗೆ ಪ್ರಥಮ ಸ್ಥಾನ ಗಳಿಸಿದ್ದರೆ, ನಜ್ಮಾ ಫರ್ ಹೀನ್/ಹಬೀಬ್ ವುಲ್ಲಾ 526 ಅಂಕ ಪಡೆದು ದ್ವಿತೀಯ ಸ್ಥಾನ ಹಾಗೂ ಮಾನ್ಯ ಆರ್./ರಾಮಚಂದ್ರಪ್ಪ 513 ಅಂಕ ಪಡೆದು ತೃತೀಯ ಸ್ಥಾನ, ತಿಮ್ಮೇಗೌಡ/ಬಿ.ಟಿ.ರಾಘವೇಂದ್ರ 512 ಅಂಕಗಳನ್ನು ಪಡೆದು ನಾಲ್ಕನೇ ಸ್ಥಾನ, ಟಿ.ಪೂರ್ವಿತಾ/ ಕೆ.ತಿಮ್ಮರಾಜು 506 ಅಂಕಗಳನ್ನು ಪಡೆದು 5 ನೇಸ್ಥಾನ ಪಡೆದು ನಮ್ಮ ಶಾಲೆಗೆ ಕೀರ್ತಿ ತಂದಿದ್ದಾರೆ.

ಈ ಸಾಲಿನಲ್ಲಿ ಪರೀಕ್ಷೆ ಬರೆದ 30 ವಿದ್ಯಾರ್ಥಿಗಳಲ್ಲಿ 28 ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಪಡೆಯುವ ಮೂಲಕ ಉತ್ತೀರ್ಣರಾಗಿದ್ದಾರೆ, ಈ ವಿದ್ಯಾರ್ಥಿಗಳಲ್ಲಿ  ಕುಮಾರಿ ಆರ್.ಮಾನ್ಯ ಕನ್ನಡದಲ್ಲಿ 125 ಕ್ಕೆ 123 ಅಂಕ, ಹಾಗೂ ವೈ.ಜೀವನ್ ಕುಮಾರ್, ಮತ್ತು ವರುಣ್ ಕುಮಾರ್ ಹಿಂದಿ ಭಾಷೆಯಲ್ಲಿ 100ಕ್ಕೆ 100 ಅಂಕಗಳನ್ನು ಪಡೆಯುವ ಮೂಲಕ ವಿದ್ಯಾಸಂಸ್ಥೆಗೆ ಕೀರ್ತಿ ತಂದಿರುತ್ತಾರೆ ಎಂಬುದಾಗಿ ಅವರು ತಿಳಿಸಿದ್ದಾರೆ.

ಅತ್ಯುತ್ತಮ ಅಂಕಗಳನ್ನು ಪಡೆಯುವ ಮೂಲಕ ನಮ್ಮ ವಿದ್ಯಾಸಂಸ್ಥೆಗೆ ಹಾಗೂ ಹೆತ್ತ ತಂದೆ-ತಾಯಿಗಳಿಗೆ, ಬೋಧಿಸಿದ ಶಿಕ್ಷಕರಿಗೆ ಕೀರ್ತಿಯನ್ನು ತಂದಿರುವ ಎಲ್ಲಾ ವಿದ್ಯಾರ್ಥಿಗಳಿಗೂ, ಹಾಗೂ ಈ ಉತ್ತಮ ಫಲಿತಾಂಶಕ್ಕೆ ಕಾರಣರಾದ ನಮ್ಮ ಪ್ರೌಢಶಾಲೆಯ ಎಲ್ಲಾ ಶಿಕ್ಷಕ-ಶಿಕ್ಷಕಿಯರು ಹಾಗೂ ಸಿಬ್ಬಂದಿ ವರ್ಗದವರಿಗೆ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ಆಲೂರುಹನುಮಂತರಾಯಪ್ಪ ತುಂಬುಹೃದಯದ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಜಿ.ಪಂ.ಮಾಜಿ ಅಧ್ಯಕ್ಷರು ಹಾಗೂ ವಾಣಿವಿಲಾಸ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಬಿ.ಎಸ್.ರಘುನಾಥ್, ವಿದ್ಯಾಸಂಸ್ಥೆಯ ಖಜಾಂಚಿ ಆರ್.ವಸಂತ್ ಕುಮಾರ್, ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕರಾದ ಶ್ರೀಮತಿ ಸೌಮ್ಯ, ವ್ಯವಸ್ಥಾಪಕಿ ಶ್ರೀಮತಿ ವಸಂತಾ, ಆಡಳಿತಾಧಿಕಾರಿ ಶ್ರೀಮತಿ ಹೇಮಲತಾ, ಪ್ರೌಢಶಾಲಾ ಶಿಕ್ಷಕ-ಶಿಕ್ಷಕಿಯರುಗಳಾದ ಶ್ರೀಮತಿ ರಜಿಯಾ ಬೇಗಂ, ಉಮೇಶ್ ಯಾದವ್, ಶ್ರೀಮತಿ ಗಂಗಮ್ಮ, ಶ್ರೀಮತಿ ರಂಜಿತಾ, ಶ್ರೀಮತಿ ಸಬೀಹಾ, ಸೇರಿದಂತೆ ಎಲ್ಲಾ ಶಿಕ್ಷಕ-ಶಿಕ್ಷಕಿಯರು ಹಾಗೂ ಸಿಬ್ಬಂದಿ ವರ್ಗದವರು ಅತ್ಯುತ್ತಮ ಅಂಕಪಡೆದು ಶಾಲೆಗೆ ಕೀರ್ತಿ ತಂದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

About The Author

Leave a Reply

Your email address will not be published. Required fields are marked *