
ಹಿರಿಯೂರು :
ನಗರದ ರೆಡ್ ಕ್ರಾಸ್ ಹಾಗೂ ರೋಟರಿ ಸಂಸ್ಥೆಯಿಂದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ವಾರದ 6 ದಿನಗಳು ಉಚಿತ ಆಹಾರ ವಿತರಣೆ ಮಾಡಲಾಗುತ್ತಿದ್ದು, ಇದರಿಂದ ಪ್ರತಿನಿತ್ಯ ಆಸ್ಪತ್ರೆಗೆ ಬರುವ ನೂರಾರು ರೋಗಿಗಳಿಗೆ ಹಾಗೂ ಅವರ ಸಹಾಯಕರುಗಳಿಗೆ ತುಂಬಾ ಅನುಕೂಲವಾಗಿದೆ ಎಂಬುದಾಗಿ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಎಂ.ಎಸ್.ರಾಘವೇಂದ್ರ ಹೇಳಿದರು.
ನಗರದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಆಸ್ಪತ್ರೆಗೆ ತಾಲ್ಲೂಕಿನ ವಿವಿಧ ಭಾಗಗಳಿಂದ ಬರುವ ರೋಗಿಗಳಿಗೆ ಹಾಗೂ ಅವರ ಸಹಾಯಕರುಗಳಿಗೆ ರೆಡ್ ಕ್ರಾಸ್ ಹಾಗೂ ರೋಟರಿ ಸಂಸ್ಥೆ ಸಹಭಾಗಿತ್ವದಲ್ಲಿ ಉಚಿತ ಆಹಾರವನ್ನು ವಿತರಿಸಿ, ನಂತರ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ವೈಸ್ ಚೇರ್ಮನ್ ಎ.ರಾಘವೇಂದ್ರ, ಎಸ್.ಎಲ್.ಎನ್.ವೆಂಕಟೇಶ್, ಜನೌಷಧಿರವಿ, ಜೈನ್, ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
