
ಹಿರಿಯೂರು :
ನಗರದ ತೇರುಬೀದಿಯಲ್ಲಿರುವ ಶ್ರೀಖಾಧ್ರಿ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಸ್ವಾಮಿಯ ನೂತನ ಪಂಚಲೋಹ ವಿಗ್ರಹ ಪ್ರತಿಷ್ಠಾಪನೆ ಹಾಗೂ ಶ್ರೀಖಾಧ್ರಿ ಲಕ್ಷ್ಮೀನರಸಿಂಹಸ್ವಾಮಿ ಜಯಂತಿ ಪೂಜಾ ಕಾರ್ಯಕ್ರಮವು ಎಪ್ರಿಲ್ 29ರ ಬುಧವಾರ ಹಾಗೂ ಎಪ್ರಿಲ್ 30ರ ಗುರುವಾರದಂದು ಅದ್ದೂರಿಯಾಗಿ ನಡೆಯಿತು ಎಂಬುದಾಗಿ ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
ಎಪ್ರಿಲ್ 29ರ ಬುಧವಾರದಂದು ಬೆಳಗ್ಗೆ 5-30 ಗಂಟೆಗೆ ಸ್ವಾಮಿಯನ್ನು ಕುನುಕಲುಗುಂಡಿಗೆ ಕರೆದೊಯ್ದು ಗಂಗಾಪೂಜೆ, ವಿಶೇಷ ಮಹಾಮಂಗಳಾರತಿ, ಸಂಜೆ ಶ್ರೀಲಕ್ಷ್ಮೀ ನರಸಿಂಹಸ್ವಾಮಿಯನ್ನು ಅದ್ದೂರಿಯಾಗಿ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು, ನಂತರ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಎಪ್ರಿಲ್ 30ರ ಗುರುವಾರದಂದು ಬೆಳಗ್ಗೆ 7 ಗಂಟೆಗೆ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ಹೋಮ-ಹವನ, ಶ್ರೀಸ್ವಾಮಿಯ ನೂತನ ಪಂಚಲೋಹ ವಿಗ್ರಹಕ್ಕೆ ಪಂಚಾಮೃತ ಅಭಿಷೇಕ, ಹೂವಿನ ಅಲಂಕಾರ ನಂತರ ವಿಗ್ರಹ ಪ್ರತಿಷ್ಠಾಪನೆ, ಮಹಾಮಂಗಳಾರತಿ, ಮದ್ಯಾಹ್ನ 12 ಗಂಟೆಗೆ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಹಾಗೂ ಸಾರ್ವಜನಿಕರು ಭಾಗವಹಿಸುವ ಮೂಲಕ ಶ್ರೀಲಕ್ಷ್ಮೀ ನರಸಿಂಹಸ್ವಾಮಿಯ ಕೃಪೆಗೆ ಪಾತ್ರರಾಗಿ, ತಮ್ಮ ತನು,ಮನ,ಧನ ಸಹಾಯ ಮಾಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು ಎಂಬುದಾಗಿ ದೇವಸ್ಥಾನದ ಆಡಳಿತ ಮಂಡಳಿ ಮಾಹಿತಿ ನೀಡಿದೆ.
