May 1, 2026

ಹಿರಿಯೂರು :

ದೈಹಿಕ ಶಿಕ್ಷಣ ಶಿಕ್ಷಕರಾಗಿ ಸುಮಾರು 34 ವರ್ಷಗಳ ಕಾಲ ಸುಧೀರ್ಘ ಸೇವೆ ಸಲ್ಲಿಸಿ, ಇದೀಗ ವಯೋನಿವೃತ್ತಿ ಹೊಂದಿರುವ ತಿಪ್ಪೇಸ್ವಾಮಿಯವರ ನಿವೃತ್ತಿ ಜೀವನವು ಅತ್ಯಂತ ಸುಖ-ಸಂತೋಷದಿಂದ ತುಂಬಿರಲಿ ಎಂಬುದಾಗಿ ಜಿಲ್ಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾದ ಮಂಜುನಾಥ್ ರವರು ಶುಭಹಾರೈಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಅನುದಾನಿತ ಶಾಲಾ ಶಿಕ್ಷಕರ ಸಂಘದಿಂದ ತಾಲೂಕಿನ ಬ್ಯಾಟರಹಳ್ಳಿ ಗ್ರಾಮದ ಶ್ರೀಪಾರ್ಥಲಿಂಗೇಶ್ವರ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ 34 ವರ್ಷ ಸೇವೆ ಸಲ್ಲಿಸಿ, ವಯೋನಿವೃತ್ತಿ ಹೊಂದಿದ ತಿಪ್ಪೇಸ್ವಾಮಿಯವರಿಗೆ ಹಮ್ಮಿಕೊಳ್ಳಲಾಗಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್, ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಶಿವಕುಮಾರ್, ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಗಿರೀಶ್, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಲೋಹಿತ್, ಸಹ ಶಿಕ್ಷಕರ ಸಂಘದ ಅಧ್ಯಕ್ಷ ಅಶೋಕ್, ಮುಖ್ಯಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಹುನೇಂದ್ರ ನಾಯ್ಕ್, ತಾಲೂಕು ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ ಕಾರ್ಯದರ್ಶಿ ಶಿವಮೂರ್ತಿ, ಖಜಾಂಚಿ ಪಾಂಡು, ಮಂಜುನಾಥ್, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಶಿವಶಂಕರಮಠದ್ ಭಾಗವಹಿಸಿದ್ದರು.

About The Author

Leave a Reply

Your email address will not be published. Required fields are marked *