October 6, 2025
05

ಹಿರಿಯೂರು :

ಸಮಾಜದಲ್ಲಿ ಆರೋಗ್ಯ, ಶಾಂತಿ ಮತ್ತು ಪ್ರಗತಿಗೆ ಮದ್ಯವರ್ಜನೆ ಅತ್ಯಗತ್ಯ.ಇಂತಹ ಶಿಬಿರಗಳು ಜನರಲ್ಲಿ ಜಾಗೃತಿ ಮೂಡಿಸಿ ಆರೋಗ್ಯಕರ ಬದುಕಿಗೆ ದಾರಿ ತೋರಿಸುತ್ತವೆ ಎಂಬುದಾಗಿ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ  ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರು ಹೇಳಿದರು.

ನಗರದ ವೇದಾವತಿ ನಗರ ಕೃಷ್ಣಪ್ಪ ಸರ್ಕಲ್ ನಲ್ಲಿ ಶ್ರೀ ಕ್ಷೇತ್ರಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಹಿರಿಯೂರು ಇವರ ವತಿಯಿಂದ  ಹಮ್ಮಿಕೊಳ್ಳಲಾಗಿದ್ದ 1985ನೇ ಮದ್ಯವರ್ಜನ ಶಿಬಿರ ಕಾರ್ಯಕ್ರಮವನ್ನು  ಉದ್ಘಾಟಿಸಿ ಅವರು ಮಾತನಾಡಿದರು.

ಇದೇ ಸಂದರ್ಭದಲ್ಲಿ 1985ನೇ ಮದ್ಯವರ್ಜನ ಶಿಬಿರವನ್ನು ಯಶಸ್ವಿಯಾಗಿ ನಡೆಸಲು ಶ್ರಮಿಸಿದ ಶ್ರೀ ಕ್ಷೇತ್ರಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಘಟಕರು, ಕಾರ್ಯಕರ್ತರು ಮತ್ತು ಭಾಗವಹಿಸಿದ ಪ್ರತಿಯೊಬ್ಬರಿಗೂ ಹೃತ್ಪೂರ್ವಕ ಧನ್ಯವಾದಗಳನ್ನು ಸಚಿವರು ಹೇಳಿದರು.

ಈ ಕಾರ್ಯಕ್ರಮದಲ್ಲಿ ಚಿತ್ರದುರ್ಗ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕರಾದ ವಿನಯ್ ಕುಮಾರ್ ಸುವರ್ಣ, 1985 ನೇ ಮದ್ಯಾವರ್ಜನಾ ಶಿಬಿರದ ವ್ಯವಸ್ಥಾಪಕರು ಸಮಿತಿ ಅಧ್ಯಕ್ಷರಾದ ಎಂ.ಶಂಕರ್ ಭಾಗವತ್, ಗೌರವ ಅಧ್ಯಕ್ಷರಾದ ಅಶೋಕ್, ಮದ್ಯಾವರ್ಜನಾ ಶಿಬಿರದ ವ್ಯವಸ್ಥಾಪಕ ಸಮಿತಿ ಮುಖ್ಯಸ್ಥರು ಹಾಗೂ ಯೋಜನಾಧಿಕಾರಿಗಳಾದ ರವಿಹಿತ್ತಲಮನಿ ಮತ್ತು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘದ ಸದಸ್ಯರು, ಒಕ್ಕೂಟದ ಅಧ್ಯಕ್ಷರು ಮೇಲ್ವಿಚಾರಕರು, ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *