May 31, 2026
004

ಹಿರಿಯೂರು :

ಇತ್ತೀಚಿಗೆ ನಡೆದಂತಹ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಶಾಖೆಯ ಪದಾಧಿಕಾರಿಗಳ ಚುನಾವಣಾ ಪ್ರಕ್ರಿಯೆಯು ಚುನಾವಣಾ ಅಧಿಕಾರಿಗಳಾಗಿ ಮಧ್ಯಾಹ್ನದ ಬಿಸಿಯೂಟ ಯೋಜನೆಯ ಸಹಾಯಕ ನಿರ್ದೇಶಕರಾದ ಚಿತ್ರಾಲಮಹೇಶ್ವರರೆಡ್ಡಿ ಅವರು ನೇತೃತ್ವದಲ್ಲಿ ನಡೆಸಲಾಯಿತು.

ಈ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಶಾಖೆಯ ನೂತನ ಅಧ್ಯಕ್ಷರಾಗಿ ಮುಂಗಸವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಶ್ರೀಮತಿ ಸುನಂದಮ್ಮ ಅವರನ್ನು ಹಾಗೂ ನೂತನ ಉಪಾಧ್ಯಕ್ಷರುಗಳಾಗಿ ಉಪ್ಪಾರಹಟ್ಟಿ ಬೆನಕನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕರಾದ ಎಸ್.ವಿ.ನಾಗೇಶ್ ಹಾಗೂ ದಾಸರಹಳ್ಳಿ ಲಾಯರ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕಿ ವೈ.ಸಿ.ದೇವರತ್ನ ಆಯ್ಕೆಯಾಗಿದ್ದಾರೆ.

ಸಂಘದ ಕಾರ್ಯದರ್ಶಿಯಾಗಿ ಕಾತ್ರಿಕೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಹೆಚ್.ಕೋಟಿಲಿಂಗಯ್ಯ, ಸಹಕಾರ್ಯದರ್ಶಿಗಳಾಗಿ ಬಿದರಕೆರೆ ಎ.ಕೆ.ಕಾಲೋನಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ಟಿ.ಮಂಜುನಾಥ್, ಹಾಗೂ ಇದ್ದಲನಾಗೇನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕಿ ಹಸೀನಾ ಆಯ್ಕೆಗೊಂಡಿದ್ದಾರೆ.

ಸಂಘದ ಖಜಾಂಚಿಯಾಗಿ ಹೂವಿನಹೊಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಎಂ.ದಿವ್ಯನಾಥ್, ಸಂಘಟನಾ ಕಾರ್ಯದರ್ಶಿಗಳಾಗಿ ಗೌಡನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಬಿ.ದಾದಾಪೀರ್, ಹಾಗೂ ಭರಂಗಿರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಜಿ.ಎಸ್.ನವೀನ್ ಇವರುಗಳು ಆಯ್ಕೆಯಾಗಿದ್ದಾರೆ ಎಂಬುದಾಗಿ ಸಂಘದ ನೂತನ ಅಧ್ಯಕ್ಷರಾದ ಶ್ರೀಮತಿ ಸುನಂದಮ್ಮ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

About The Author

Leave a Reply

Your email address will not be published. Required fields are marked *