
ಹಿರಿಯೂರು :
ತಾಲ್ಲೂಕಿನ ಆದಿವಾಲ ಗ್ರಾಮದ ಈದ್ಗಾ ಮೈದಾನದಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಸಚಿವರಾಗಿದ್ದ ಡಿ.ಸುಧಾಕರ್ ರವರ ಪುತ್ರ ಸುಹಾಸ್ ಸುಧಾಕರ್ ಭಾಗವಹಿಸಿ, ಎಲ್ಲಾ ಮುಸ್ಲಿಂ ಬಾಂಧವರಿಗೆ ಈದ್-ಉಲ್-ಅಧಾ ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಿದರು.
ಈ ಸಂದರ್ಭದಲ್ಲಿ ಜಿ.ಪಂ.ಮಾಜಿ ಸದಸ್ಯ ನಾಗೇಂದ್ರನಾಯ್ಕ, ಸೇರಿದಂತೆ ಗ್ರಾಮದ ಮುಸ್ಲಿಂ ಮುಖಂಡರು, ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
