
ಹಿರಿಯೂರು :
ಇದೇ ಜೂನ್ 14ರ ಭಾನುವಾರದಂದು ಬೆಳಿಗ್ಗೆ 10-00 ಗಂಟೆಗೆ ನಗರದ ನೆಹರೂ ಮೈದಾನದಲ್ಲಿರುವ ರೋಟರಿಭವನದಲ್ಲಿ ತಾಲ್ಲೂಕು ಕುಂಚಿಟಿಗರ ಕ್ಷೇಮಾಭಿವೃದ್ಧಿ ಸಂಘದಿಂದ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂಬುದಾಗಿ ತಾಲ್ಲೂಕು ಕುಂಚಿಟಿಗರ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಜಿ.ಹನುಮಂತರಾಯಪ್ಪ ತಿಳಿಸಿದ್ದಾರೆ.
ತಾಲ್ಲೂಕು ಕುಂಚಿಟಿಗರ ಕ್ಷೇಮಾಭಿವೃದ್ಧಿ ಸಂಘದಿಂದ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ಕುಂಚಿಟಿಗರ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದ್ದು, ಅರ್ಹ ವಿದ್ಯಾರ್ಥಿಗಳು ಈ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂಬುದಾಗಿ ಅವರು ತಿಳಿಸಿದ್ದಾರೆ.
ಈ ಸಭೆಗೆ ಜಿಲ್ಲೆಯ ತಾಲ್ಲೂಕಿನ ಕುಂಚಿಟಿಗ ಸಮಾಜದ ಎಲ್ಲಾ ಮುಖಂಡರುಗಳು, ಸಂಘದ ಪದಾಧಿಕಾರಿಗಳು, ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾದ ಮಕ್ಕಳು ಜೊತೆಗೆ ಪೋಷಕರು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಈ ಮೂಲಕ ಅವರು ಮನವಿಮಾಡಿದ್ದಾರೆ.
