July 29, 2026
0003

ಹಿರಿಯೂರು :

ಸರ್ಕಾರಿ ಶಾಲೆಗಳಿಗೆ ಬರುವ ಮಕ್ಕಳಿಗೆ ಅಗತ್ಯವಿರುವ ಊಟದ ತಟ್ಟೆ ಹಾಗೂ ಲೋಟಗಳನ್ನು ಕೊಡುಗೆಯಾಗಿ ನೀಡುತ್ತಿರುವ ಶ್ರೀಮತಿ ಮಮತಾ ಕೃಷ್ಣಮೂರ್ತಿಯವರ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂಬುದಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರಾದ ಬಿ.ರಮೇಶ್  ಹೇಳಿದರು.

ತಾಲ್ಲೂಕಿನ ಸೂರಗೊಂಡನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ತಾಲ್ಲೂಕು ಒಕ್ಕಲಿಗರ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಮಮತಾ ಕೃಷ್ಣಮೂರ್ತಿಯವರು ಕೊಡುಗೆಯಾಗಿ ನೀಡಿರುವ 70 ಲೋಟ ಮತ್ತು 70 ತಟ್ಟೆಗಳನ್ನು ವಿತರಿಸಿ, ನಂತರ ಅವರು ಮಾತನಾಡಿದರು.

ಜ್ಞಾನದೇವಿಯವರು ಮಾತನಾಡಿ, ವಿದ್ಯಾರ್ಥಿಗಳಿಗೆ ಮದ್ಯಾಹ್ನದ ಊಟಕ್ಕೆ ಅಗತ್ಯವಾದ ತಟ್ಟೆ ಹಾಗೂ ಲೋಟಗಳನ್ನು ಕೊಡುಗೆ ನೀಡುವ ಮೂಲಕ ಸರ್ಕಾರಿ ಶಾಲೆಯ ಮಕ್ಕಳ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ಶ್ರೀಮತಿ ಮಮತಾ ಕೃಷ್ಣಮೂರ್ತಿಯವರಿಗೆ ಶಾಲೆಯ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಪರವಾಗಿ ಧನ್ಯವಾದಗಳು ಎಂಬುದಾಗಿ ಹೇಳಿದರು.ಈ ಸಂದರ್ಭದಲ್ಲಿ  ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *