
ಹಿರಿಯೂರು :
ಕನ್ನಡದ ಹೆಸರಾಂತ ಚಲನಚಿತ್ರಗಳಾದ ‘ಫಲಿತಾಂಶ’, ‘ಗಾಳಿಮಾತು’, ‘ಪಡವಾರಹಳ್ಳಿ ಪಾಂಡವರು’, ‘ಬಂಧನ’, ಗಳಂತಹ ಹಲವಾರು ಚಲನಚಿತ್ರಗಳಲ್ಲಿ ಯಶಸ್ವಿಯಾಗಿ ಅಭಿನಯಿಸಿ ಕನ್ನಡ ಚಿತ್ರ ರಸಿಕರ ಮನಗೆಲ್ಲುವ ಮೂಲಕ ಇಂದಿಗೂ ಜನರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿರುವ ನಟ ಜೈಜಗದೀಶ್ ರವರಿಗೆ “ಹಿರಿಯೂರು ನ್ಯೂಸ್” ತಂಡದಿಂದ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.
ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ನಟ ಜೈಜಗದೀಶ್ ರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ ಆಯಸ್ಸು ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ ಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರು ನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಕೇಶವಮೂರ್ತಿ, ಶ್ರೀಪಾದ್ ವಸಿಷ್ಟ, ಶಿವರಾಜ್, ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಶುಭ ಹಾರೈಸಿದ್ದಾರೆ.
