
ಹಿರಿಯೂರು :
ನಿಮ್ಮೆಲ್ಲರ ಪ್ರೀತಿ, ವಿಶ್ವಾಸ ಮತ್ತು ಆಶೀರ್ವಾದವೇ ನನ್ನ ಸೇವಾ ಪಯಣಕ್ಕೆ ಶಕ್ತಿಯಾಗಿದ್ದು, ಮುಂದೆಯೂ ನಿಮ್ಮೊಂದಿಗೆ ಸದಾ ನಿಂತು, ವಾರ್ಡ್ನ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂಬುದಾಗಿ ಸಚಿವ ಡಿ.ಸುಧಾಕರ್ ಪುತ್ರ ಸುಹಾಸ್ ಸುಧಾಕರ್ ಹೇಳಿದರು.
ನಗರದ ವಾರ್ಡ್ ಸಂಖ್ಯೆ 7ರಲ್ಲಿ ಮನೆ ಮನೆಗೆ ಭೇಟಿ ನೀಡಿ, ಸ್ಥಳೀಯ ಸಮಸ್ಯೆಗಳು, ಅಗತ್ಯಗಳು ಹಾಗೂ ಅಭಿವೃದ್ಧಿ ಕಾರ್ಯಗಳ ಕುರಿತು ಜನರ ಅಭಿಪ್ರಾಯಗಳನ್ನು ಆಲಿಸಿ, ನಂತರ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ಪಕ್ಷದ ಕಾರ್ಯಕರ್ತರು, ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
