July 29, 2026
000004

ಹಿರಿಯೂರು :

ನಗರದ ನೆಹರು ಮೈದಾನದ ಎ.ಕೃಷ್ಣಪ್ಪ ರೋಟರಿ ಸಭಾಂಗಣದಲ್ಲಿ ಸಂವಿಧಾನ ಸಂರಕ್ಷಣಾ ಸಮಿತಿ (ರಿ) ರಾಜ್ಯ ಸಮಿತಿ ವತಿಯಿಂದ ಇದೇ ಜುಲೈ 26 ರ ಭಾನುವಾರ ಬೆಳಗ್ಗೆ 10-30 ಕ್ಕೆ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ. ಹಾಗೂ ಪ್ರೊ.ಬಿ.ಕೃಷ್ಣಪ್ಪ ರವರ 88 ನೇ ಜಯಂತಿ ಮತ್ತು ಅಂಬೇಡ್ಕರ್ ಸಂವಿಧಾನ ಸಂರಕ್ಷಣಾ ಸಮಿತಿ (ರಿ) ಮೊದಲನೇ ವರ್ಷದ ವಾರ್ಷಿಕೋತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂಬುದಾಗಿ ಸಂವಿಧಾನ ಸಂರಕ್ಷಣಾ ಸಮಿತಿ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ,ರಾಮಚಂದ್ರ ತಿಳಿಸಿದ್ದಾರೆ.  

ನಗರದ ಪ್ರವಾಸಿ ಮಂದಿರದಲ್ಲಿ ಸಂವಿಧಾನ ಸಂರಕ್ಷಣಾ ಸಮಿತಿ (ರಿ) ರಾಜ್ಯ ಸಮಿತಿ ವತಿಯಿಂದ ಸರ್ವ ಜನಾಂಗದ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಪಾಸಾದ ಶೇಕಡ 80%ಕಿಂತ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಕರಪತ್ರವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವಾಗ ವಿದ್ಯಾರ್ಥಿಗಳ 2 ಪಾಸ್ ಪೋರ್ಟ್ ಭಾವಚಿತ್ರ ಎಸ್.ಎಸ್.ಎಲ್.ಸಿ ಅಥವಾ ದ್ವಿತೀಯ ಪಿಯುಸಿ ಮಾರ್ಕ್ಸ್ ಕಾರ್ಡ್, ವಾಸಸ್ಥಳ ದೃಡೀಕರಣ ಪತ್ರಗಳನ್ನು ಇದೇ ಜುಲೈ 20ರ ಒಳಗಾಗಿ ಸಲ್ಲಿಸಬೇಕು ಎಂಬುದಾಗಿ ಅವರು ಹೇಳಿದರು.

ಈ ಸಂದರ್ಭದಲ್ಲಿ ಸಂವಿಧಾನ ಸಂರಕ್ಷಣಾ ಸಮಿತಿ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ.ರಾಮಚಂದ್ರ, ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಆರ್.ರಾಘವೇಂದ್ರ, ರಾಜ್ಯ ಸಂಘಟನಾ ಕಾರ್ಯದರ್ಶಿಯಾದ ಎನ್.ಮಾರುತಿ, ಜಿಲ್ಲಾ ಕಾರ್ಯಧ್ಯಕ್ಷರಾದ ರಂಗನಾಥ್ (ಬಗ್ಗನಾಡು), ಅಲ್ಪ ಸಂಖ್ಯಾತರ ಘಟಕ ಜಿಲ್ಲಾಧ್ಯಕ್ಷರಾದ ಸಾಧಿಕ್ (ಸೀಮೆಎಣ್ಣೆ) ಜಿಲ್ಲಾ ಉಪಾಧ್ಯಕ್ಷರುಗಳಾದ ಲಕ್ಷ್ಮಣ್ ರಾವ್, ಕೆಂಚಪ್ಪ ಆಟೋ, ಹಿರಿಯೂರು ತಾಲ್ಲೂಕು ಅಧ್ಯಕ್ಷರಾದ ಓಂಕಾರ್, ಕೆ ಮೂರ್ತಿ (ದೊಡ್ಡಘಟ್ಟ) ತಾಲ್ಲೂಕು ಕಾರ್ಯಧ್ಯಕ್ಷರಾದ ರಂಗಸ್ವಾಮಿ (ಆಟೋ) ಗೌರವಧ್ಯಕ್ಷರಾದ ದೇವರಾಜ್, ನಗರ ಅಧ್ಯಕ್ಷರಾದ ದಿಲೀಪ್, ಆಟೋ ಘಟಕ ಅಧ್ಯಕ್ಷರಾದ ರಮೇಶ್, ತಾಲ್ಲೂಕು ಸಂಘಟನಾ ಕಾರ್ಯದರ್ಶಿಗಳಾದ ರಾಘವೇಂದ್ರಸೀಗೆಹಟ್ಟಿ, ಅಜಯ್, ತಾಲ್ಲೂಕು ಕಾರ್ಯದರ್ಶಿಯಾದ ಗಿರೀಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *