
ಹಿರಿಯೂರು :
ಎಲ್ಲರ ಅಮೂಲ್ಯ ಸಲಹೆ ಮತ್ತು ಸಹಕಾರದೊಂದಿಗೆ ಸಂಘಟನೆಯನ್ನು ಮತ್ತಷ್ಟು ಬಲಪಡಿಸಿ, ಜನರ ಆಶೋತ್ತರಗಳಿಗೆ ಸ್ಪಂದಿಸುವ ಮೂಲಕ ಜನಪರವಾಗಿ ಕಾರ್ಯನಿರ್ವಹಿಸುವ ಸಂಕಲ್ಪವನ್ನು ಮಾಡಿದ್ದೇನೆ ಎಂಬುದಾಗಿ ಸುಹಾಸ್ ಸುಧಾಕರ್ ಹೇಳಿದರು.
ತಾಲ್ಲೂಕಿನ ಮರಡಿಹಳ್ಳಿ ಮತ್ತು ಬುರುಜನರೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಭೆ ನಡೆಸಿ, ನಂತರ ಅವರು ಮಾತನಾಡಿದರು.
ಈ ಸಭೆಯಲ್ಲಿ ಸ್ಥಳೀಯ ಸಮಸ್ಯೆಗಳು, ಸಾರ್ವಜನಿಕರ ಅಗತ್ಯಗಳು ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಸಂಘಟನಾ ಚಟುವಟಿಕೆಗಳ ಕುರಿತು ಸವಿಸ್ತಾರವಾಗಿ ಚರ್ಚೆ ನಡೆಸಿದರು.
