
ಹಿರಿಯೂರು :
ನಿಮ್ಮ ಪ್ರೀತಿ, ವಿಶ್ವಾಸ ಮತ್ತು ಆಶೀರ್ವಾದವೇ ನಮ್ಮ ಕುಟುಂಬದ ಶಕ್ತಿಯಾಗಿದ್ದು, ಇನ್ನು ಮುಂದೆಯೂ ಸಹ ನಿಮ್ಮೆಲ್ಲರ ಸಹಕಾರ ಮತ್ತು ಮಾರ್ಗದರ್ಶನವನ್ನು ನೀಡುವ ಮೂಲಕ ನನಗೆ ನಿಮ್ಮ ಸೇವೆಯನ್ನು ಮಾಡಲು ಅವಕಾಶ ಕಲ್ಪಿಸಬೇಕು ಎಂಬುದಾಗಿ ಸುಹಾಸ್ ಸುಧಾಕರ್ ಹೇಳಿದರು.
ನಗರದ ವಾರ್ಡ್ ಸಂಖ್ಯೆ 14ರಲ್ಲಿ ಮನೆ ಮನೆಗೆ ಭೇಟಿ ನೀಡಿ, ಸಾರ್ವಜನಿಕರೊಂದಿಗೆ ಆತ್ಮೀಯವಾಗಿ ಮಾತನಾಡಿ ಅವರ ಸಮಸ್ಯೆಗಳು, ಸಲಹೆಗಳು ಹಾಗೂ ಅಭಿಪ್ರಾಯಗಳನ್ನು ಆಲಿಸಿ, ನಂತರ ಮಾತನಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ಪಕ್ಷದ ಕಾರ್ಯಕರ್ತರು ಹಾಗೂ ವಾರ್ಡ್ ಸಂಖ್ಯೆ 14ರ ನಿವಾಸಿಗಳು ಉಪಸ್ಥಿತರಿದ್ದರು.
